ಮುಂಬಯಿ ಕರ್ನಾಟಕ ಬದಲಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ; ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಂಬಯಿ -ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ಮಹತ್ವ ನಿರ್ಣಯವನ್ನು ಇಂದು (ಸೊಮವಾರ) ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿತ್ತು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂಬೈ ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ನಿರ್ಧಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದರು.
ಕೆಲ ದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮುಂಬೈ-ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅದರಂತೆ ಈಗ ಮುಂಬೈ ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಬಹು ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ:
ರಾಜ್ಯದಲ್ಲಿ ಸುಲಭವಾಗಿ ಹಾಗೂ ಕಡಿಮೆ ದರದಲ್ಲಿ ಮರಳು ದೊರೆಯುವಂತಾಗಲು ರಾಜ್ಯ ಸರ್ಕಾರ ಹೊಸ ನೀತಿ ಜಾರಿಗೊಳಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಮಹತ್ವದ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ತರಲು ಸಂಪುಟ ನಿರ್ಧರಿಸಿದೆ. ಇದರಿಂದ ಸುಲಭವಾಗಿ ಕಡಿಮೆ ದರದಲ್ಲಿ ಮರಳು ಲಭ್ಯವಾಗಲಿದೆ ಎಂದು ಅವರು ಹೇಳಿದರು.
ಮೂರು ಹಂತಗಳಲ್ಲಿ ಮರಳು ಮಾರಾಟ ಮಾಡಲು ಈ ಹೊಸ ನೀತಿಯಲ್ಲಿ ಅವಕಾಶವಿದೆ. ಅದರಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮರಳು ತೆಗೆಯುವವರಿಗೆ ಒಂದು ಮೆಟ್ರಿಕ್ ಟನ್ ಮರಳಿಗೆ ೩೦೦ ರೂ. ದರ ನಿಗದಿ ಮಾಡಲಾಗಿದೆ. ನದಿ ಪಾತ್ರದಲ್ಲಿ ಮರಳು ತೆಗೆಯುವವರಿಗೆ ೧ ಮೆಟ್ರಿಕ್ ಟನ್‌ಗೆ ೭೦೦ ರೂ. ನಿಗದಿ ಮಾಡಲಾಗಿದೆ. ಸಮುದ್ರಗಳಲ್ಲಿ ಯಾವುದೇ ಯಂತ್ರಗಳನ್ನು ಬಳಸದೆ ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶವನ್ನು ಈ ನೀತಿಯಲ್ಲಿ ಕಲ್ಪಿಸಲಾಗಿದೆ. ಆದರೆ ಮರಳು ತೆಗೆಯಲು ಸಂಬಂಧಿತ ಪ್ರಾಧಿಕಾರಗಳಿಂದ ಒಪ್ಪಿಗೆ ಪಡೆಯಬೇಕು. ಇದಕ್ಕಾಗಿ ಪ್ರಾಧಿಕಾರವನ್ನು ರಚಿಸಲಾಗುವುದು. ಅಗತ್ಯ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಗ್ರಾಮ ಪಂಚಾಯತಗಳಿಗೆ ಮರಳು ಗಣಿಗಾರಿಕೆಯಿಂದ ಬರುವ ಹಣದಲ್ಲಿ ಶೇ. ೫೦ ರಷ್ಟು ಹಣವನ್ನು ಆಯಾ ಗ್ರಾ.ಪಂಗಳಿಗೆ ನೀಡಲಾಗುವುದು. ಶೇ. ೨೫ ರಷ್ಟು ಹಣವನ್ನು ಮರಳು ಸಾಗಾಣೆ ಮಾಡುವ ಲಾರಿಗಳಲ್ಲಿ ಬರುವ ಗ್ರಾಮ ಪಂಚಾಯತಗಳ ರಸ್ತೆ ಅಭಿವೃದ್ಧಿಗೆ ಬಳಸಲು ಅವಕಾಶವನ್ನು ಈ ನೀತಿಯಲ್ಲಿ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಮರಳಿಗೆ ರಾಯಲ್ಟಿಯನ್ನು ವಿಧಿಸಲಾಗುತ್ತಿದೆ. ರಾಯಲ್ಟಿಯ ಪ್ರಮಾಣ ಕಡಿಮೆ ಇರುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement