ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸಿ ಪತ್ರ ಬರೆದ ಪುನೀತ್​ ಪತ್ನಿ ಅಶ್ವಿನಿ; ಇಲ್ಲಿದೆ ಪತ್ರ

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಅವರ ಅಕಾಲಿಕ ನಿಧನದ ನೋವಿನ ನಡುವೆಯೂ ಪುನೀತ್‌ ಅವರ ಪತ್ನಿ ಅಶ್ವಿನಿ ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದಿದ್ದಾರೆ.
ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಧನ್ಯವಾದ ಅರ್ಪಿಸಿ ಪತ್ರ ಬರೆದಿದ್ದಾರೆ.
ಪುನೀತ್​ ರಾಜ್​ಕುಮಾರ್​ ನಿಧನದ ಸುದ್ದಿ ನಮ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ಆಯಿತು. ಆ ಸಂದರ್ಭವನ್ನು ನಿಭಾಯಿಸುವುದು ಅಷ್ಟು ಸುಲಭದ್ದಾಗಿರಲಿಲ್ಲ. ಇಂಥ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸಿದೆ. ಅದಕ್ಕಾಗಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಪುನೀತ್ ಅವರು ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದವರು. ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಅವರನ್ನು ಸಕಲ ಗೌರವಗಳೊಂದಿಗೆ ಕಳಿಸಿಕೊಡುವುದು ಅನಿವಾರ್ಯ ಆಗಿತ್ತು. ಇಂತಹ ಸಂದರ್ಭದಲ್ಲಿ ಗೃಹ ಮಂತ್ರಿಗಳಾದ ತಾವು ನಮಗೆ ಬೆಂಬಲವಾಗಿ ನಿಂತಿದ್ದೀರಿ’ ಎಂದು ಪತ್ರದಲ್ಲಿ ಅಶ್ವಿನಿ ತಿಳಿಸಿದ್ದಾರೆ.
ಲಕ್ಷಾಂತರ ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದ್ದಷ್ಟೇ ಅಲ್ಲದೆ, ಅಂತ್ಯ ಸಂಸ್ಕಾರ ಪೂರ್ಣ ಆಗುವವರೆಗೂ ಜೊತೆಗಿದ್ದು ಧೈರ್ಯ ನೀಡಿದ್ದೀರಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೀವು ಕೈಗೊಂಡ ಕ್ರಮಗಳಿಂದ ನಾವು ಅವರಿಗೊಂದು ಸೂಕ್ತವಾದ ವಿದಾಯ ಹೇಳಲು ಸಾಧ್ಯವಾಗಿದೆ. ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲ ಅಭಿಮಾನಿಗಳ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು’ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಪತ್ರ ಬರೆದಿದ್ದಾರೆ. ಅದೇ ರೀತಿ ಬಿಬಿಎಂಪಿ ಆಯುಕ್ತರಿಗೂ ಪತ್ರ ಬರೆಯಲಾಗಿದೆ.

ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement