ಛತ್ತೀಸ್‌ಗಡ: ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರ ಸಾವುಗುಂಡು ಹಾರಿಸಿದ ಸಿಆರ್‌ಪಿಎಫ್ ಸಿಬ್ಬಂದಿ, 4 ಸಾವು, 13 ಮಂದಿಗೆ ಗಾಯ..!

ಸುಕ್ಮಾ:ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ನಂತರ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವಿಗೀಡಾದ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ.
ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ತಾರಕ್ಕೇರಿದ್ದು, ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಹಾಗೂ ಇತರ ಇಬ್ಬರು ಸಹ ಸಾವಿಗೀಡಾಗಿದ್ದಾರೆ.
ರಾಯಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50ನೇ ಬೆಟಾಲಿಯನ್‌ನ ಶಿಬಿರದಲ್ಲಿ ಸೋಮವಾರ ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಯೋಧನೊಬ್ಬ ತನ್ನ AK-47 ರೈಫಲ್‌ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಕೂಡಲೇ ಯೋಧನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಗಾಯಗೊಂಡ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಸೈನಿಕರ ನಡುವೆ ಕೆಲಕಾಲ ವಾಗ್ವಾದ ನಡೆದಿದ್ದು, ನಂತರ ಹಿಂಸಾಚಾರಕ್ಕೆ ತಿರುಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಆರೋಪಿ ಜವಾನ ಏಕೆ ಗುಂಡಿನ ದಾಳಿ ನಡೆಸಿದ್ದಾನೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿಆರ್‌ಪಿಎಫ್ ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement