ಪೇಜಾವರ ಶ್ರೀ, ತುಳಸಿ ಗೌಡ, ಮಂಜಮ್ಮ ಜೋಗತಿ, ಹಾಜಬ್ಬ, ವಿಜಯ ಸಂಕೇಶ್ವರ ಸೇರಿ 119 ಸಾಧಕರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ಸಾಧನೆಗಳನ್ನು ಮಾಡಿದ 2020 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ 119 ಸಾಧಕರಿಗೆ ಪ್ರದಾನ ಮಾಡಿದರು.
7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಯಿತು, ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪೇಜಾವರ ಶ್ರೀಗಳು ಹಾಗೂ ಪ್ರಖ್ಯಾತ ಗಾಯಕ ಎಸ್ .ಪಿ. ಬಾಲ ಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಯಿತು.
ಕನ್ನಡಿಗರಾದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಅವರಿಗೆ ಪದ್ಮ ವಿಭೂಷಣ, ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯತು. ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡ ಜಾನಪದದ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಪರಿಸರ ಪ್ರೇಮಿ ತುಳಸಿ ಗೌಡ. ವಿಆರ್‌ಎಲ್‌ ಸಮೂಹ ಸಂಸ್ಥೆಯ ಡಾ.ವಿಜಯ ಸಂಕೇಶ್ವರ ಅವರಿಗೆ ರಾಷ್ಟ್ರಪತಿಗಳು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.
ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ,ಭಾರತದ ಮೊದಲ ಮಹಿಳಾ ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ (ನಿವೃತ್ತ) ವೈದ್ಯಕೀಯ ಕ್ಷೇತ್ರಕ್ಕಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸದರು.
ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಪದ್ಮಶ್ರೀ, ಗಾಯಕ ಅದ್ನಾನ್ ಸಾಮಿ, ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಹಾಕಿ ತಂಡವನ್ನು ಮುನ್ನಡೆಸಿದ್ದ ರಾಣಿ ರಾಂಪಾಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.

ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ಬರಿಗಾಲಲ್ಲಿ ಪ್ರಶಸ್ತಿ ಪಡೆದ ಅಕ್ಷರ ಸಂತ..
ಅನಕ್ಷರಸ್ಥನಾಗಿದ್ದರೂ ನೂರಾರು ಮಂದಿಗೆ ಶಿಕ್ಷಣ ದೊರಕುವಲ್ಲಿ ಕಾರಣರಾದ ಅಕ್ಷರ ಸಂತನೆಂದೇ ಜನಮಾನಸದಲ್ಲಿ ಮನ್ನಣೆ ಗಳಿಸಿರುವ ಹರೇಕಳ ಹಾಜಬ್ಬ ಅವರು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ಹಾಜಬ್ಬ ಅವರು ಬರಿಗಾಲಿನಲ್ಲಿ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೆರೆದಿದ್ದ ಎಲ್ಲಾ ಗಣ್ಯರ ಗಮನ ಸೆಳೆದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement