ಮಹಾಮಳೆಗೆ ಚೆನ್ನೈ ತತ್ತರ..: ಅಗತ್ಯ ಸೇವೆ ಹೊರತುಪಡಿ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಮನವಿ

ಚೆನ್ನೈ: ಮಹಾಮಳೆಗೆ ತಮಿಳುನಾಡು ತತ್ತರಿಸಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಚೆನ್ನೈ ಸೇರಿದಂತೆ ಹಲವು ನಗರಗಳು ಜಲಾವೃತವಾಗಿದೆ. ತಮಿಳುನಾಡಿನ ರಾಜಧಾನಿಯಾದ ಚೆನ್ನೈನಲ್ಲಿ 2015 ರ ನಂತರ ಇದೇ ಮೊದಲ ಭಾರಿಗೆ ಅತೀ ಹೆಚ್ಚು ಮಳೆಯಾಗಿದೆ.ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳನ್ನು ಹೊರತುಪಡಿಸಿ ರಾಜ್ಯವು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳಿಗೆ ಎರಡು ರಜೆ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಉದ್ಯೋಗಿಗಳಿಗೆ ಒಂದು ದಿನದ ರಜೆ ಅಥವಾ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಒದಗಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಚೆನ್ನೈನಲ್ಲಿರುವ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುವ ಸಾಧ್ಯತೆ..:
ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 4.5 ಕಿಮೀ ವರೆಗೆ ವಿಸ್ತರಿಸಿದೆ. ಇದರ ಪ್ರಭಾವದಿಂದ ಮಂಗಳವಾರ (ನವೆಂಬರ್ 9) ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ನಂತರದ 48 ಗಂಟೆಗಳಲ್ಲಿ ಇದು ಹೆಚ್ಚಾಗಿ ಉತ್ತರ ತಮಿಳುನಾಡು ಕರಾವಳಿಯತ್ತ ಚಲಿಸುವ ಸಾಧ್ಯತೆ ಇದೆ. ಇದರಿಂದಾಗಿ ನವೆಂಬರ್ 9 ರಿಂದ ನವೆಂಬರ್ 11 ರ ನಡುವೆ ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಮಿಳುನಾಡಿನಲ್ಲಿ ನಾಲ್ಕು ತಂಡಗಳನ್ನು ನಿಯೋಜಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪರಿಸ್ಥಿತಿಯನ್ನು ವಿಚಾರಿಸಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡುವಂತೆ ತಮ್ಮ ಸಂಸದರು ಮತ್ತು ಶಾಸಕರಿಗೆ ಸೂಚಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಟಾಲಿನ್, “ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಆಯಾ ಪ್ರದೇಶಗಳಿಗೆ ಕಳುಹಿಸಲಾಗಿದೆ.
ಚೆನ್ನೈ ಮತ್ತು 11 ಜಿಲ್ಲೆಗಳು 20 ಸೆಂ.ಮೀ ಮತ್ತು ಅದಕ್ಕಿಂತ ಹೆಚ್ಚಿನ ಮಳೆಯಾಗಿದೆ. ಸಿರುಕಲತ್ತೂರು, ಕಾವನೂರು, ಕುಂದ್ರಾತೂರ್, ತಿರುವ್ಮುಡಿವಕ್ಕಂ, ವಜುತಿಗಿಮೈಡು, ತಿರುನೀರ್ಮಲೈ, ಅಡ್ಯಾರ್ ಮತ್ತು ಅಂಬತ್ತೂರು, ಅಶೋಕ್ ಪಿಲ್ಲರ್ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement