ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಫಾರ್ಮಸಿ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದ ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರ ಹತ್ಯೆ ಮುಂದುವರಿದಿದೆ. ಸೋಮವಾರ ಸಂಜೆ ಶ್ರೀನಗರದ ಬೊಹ್ರಿ ಕಡಾಲ್​ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತನನ್ನು ಮೊಹಮ್ಮದ್​ ಇಬ್ರಾಹಿಂ ಖಾನ್​ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು ಎನ್ನಲಾಗಿದೆ. ಅವರು ಸೇಲ್ಸ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್​​ರ ಹೊಟ್ಟೆಗೆ ಗುಂಡು ಹೊಡೆದಿದ್ದರು. ಇದರಿಂದಾಗಿ ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಅವರನ್ನು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಇಬ್ರಾಹಿಂ ಫಾರ್ಮಸಿಯೊಂದರ ಸೇಲ್ಸ್​ಮ್ಯಾನ್​ ಆಗಿದ್ದರು. ಈ ಫಾರ್ಮಸಿ ನಡೆಸುತ್ತಿರುವ ವೈದ್ಯರು ಕಾಶ್ಮೀರಿ ಪಂಡಿತರಾಗಿದ್ದಾರೆ ಎಂದು ಹೇಳಲಾಗಿದೆ. ಬೋಹ್ರಿ ಕಡಲ್​ ಏರಿಯಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ನಡೆದ ಬಗ್ಗೆ ಸಂಜೆ ಸುಮಾರು 8.10ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ನಾವು ಹೋಗಿ ನೋಡಿದಾಗ ಇಬ್ರಾಹಿಂ ಖಾನ್​ ರಕ್ತದ ಮಡುವಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಭಯೋತ್ಪಾದಕರನ್ನು ಹುಡುಕುವ ಕಾರ್ಯಾಚರಣೆಯೂ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಪ್ರಮಾಣ ಹೆಚ್ಚಾಗಿದೆ.

ಪ್ರಮುಖ ಸುದ್ದಿ :-   2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement