ಶ್ರೀನಗರ: ಪೊಲೀಸ್ ಪೇದೆ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.
ಶ್ರೀನಗರದ ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಅವರ ನಿವಾಸದ ಬಳಿಯೇ ಗುಂಡಿನ ದಾಳಿ ನಡೆಸಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಪೊಲೀಸ್ ಪೇದೆಯನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಪೊಲೀಸ್ ಪೇದೆ ಮೃತಪಟ್ಟಿದ್ದರು. ಉಗ್ರರಿಗಾಗಿ ಆ ಪ್ರದೇಶದಲ್ಲಿ ಶೋಧಕಾರ್ಯಾಚರಣೆ ನಡೆಯುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ವಿಭವಕುಮಾರ 7-8 ಬಾರಿ ನನ್ನ ಕಪಾಳಕ್ಕೆ ಹೊಡೆದಿದ್ದಾನೆ, ಹೊಟ್ಟೆಗೆ ಒದ್ದಿದ್ದಾನೆ....: ಎಫ್‌ಐಆರ್‌ನಲ್ಲಿ ಸಂಸದೆ ಸ್ವಾತಿ ಮಲಿವಾಲ್ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement