195 ಸಿಬ್ಬಂದಿಯ ಕೋರಿಕೆ ವರ್ಗಾವಣೆ ಮಾಡಿದ ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಬಹು ದಿನಗಳ ಕೋರಿಕೆಯಂತೆ ವರ್ಗಾವಣೆಗಳನ್ನು ಪರಿಗಣಿಸುವುದು ಸೂಕ್ತ ಎಂದು ನಿರ್ಣಯಿಸಿ, ಅರ್ಹ ಚಾಲನಾ ಸಿಬ್ಬಂದಿ ಮತ್ತು ಸಂಚಾರ ಶಾಖೆಯ 195 ಸಿಬ್ಬಂದಿ ಕೋರಿಕೆಗಳನ್ನು ಪರಿಗಣಿಸಿ ಸಂಸ್ಥೆಯ ವರ್ಗಾವಣೆಯ ಮಾರ್ಗಸೂಚಿಗಳನ್ವಯ ಪಾರದರ್ಶಕವಾಗಿ ವರ್ಗಾವಣೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ವರ್ಗಾವಣೆಗೆ ಅರ್ಹರಿರುವ ಸಿಬ್ಬಂದಿ ಕೋರಿಕೆ, ಪತಿ/ಪತ್ನಿ ಪ್ರಕರಣ ಹಾಗೂ ಪರಸ್ಪರ ಕೋರಿಕೆ, ವಿಧವೆ/ವಿಧುರ ಪ್ರಕರಣಗಳನ್ನು ವರ್ಗಾವಣೆಗೆ ಪರಿಗಣಿಸಲಾಗಿದೆ. ಸಾಮಾನ್ಯ ಕೋರಿಕೆ ಅರ್ಜಿಗಳಲ್ಲಿ ಉತ್ತರ ಕನ್ನಡ ವಿಭಾಗದಲ್ಲಿ ಅತೀ ಹೆಚ್ಚಿನ ಚಾಲನಾ ಸಿಬ್ಬಂದಿ ಕೊರತೆ ಇರುವುದರಿಂದ, ಸದರಿ ವಿಭಾಗದಿಂದ ಬೇರೆ ವಿಭಾಗಗಳಿಗೆ ವರ್ಗಾವಣೆ ಕೋರಿದ ಸಿಬ್ಬಂದಿಗಳ ಕೋರಿಕೆಗಳನ್ನು ಹಾಗೂ ಬಾಗಲಕೋಟೆ ವಿಭಾಗದಲ್ಲಿ ಪ್ರಸ್ತುತ ಚಾಲನಾ ಸಿಬ್ಬಂದಿ ಅವಶ್ಯಕತೆ ಇಲ್ಲದಿರುವುದರಿಂದ ಬಾಗಲಕೋಟೆ ವಿಭಾಗಕ್ಕೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ ಸಿಬ್ಬಂದಿ ಅರ್ಜಿ ಪರಿಗಣಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಇನ್ನುಳಿದ ವಿಭಾಗಗಳಿಂದ ಬೇರೆ ವಿಭಾಗಗಳಿಗೆ ವರ್ಗಾವಣೆ ಕೋರಿ ಕೇಂದ್ರ ಕಚೇರಿಯಲ್ಲಿ ಸ್ವೀಕೃತಿಯಾದ ಅರ್ಹರಿರುವ 195 ಸಂಚಾರ ಮತ್ತು ಚಾಲನಾ ಸಿಬ್ಬಂದಿ ವರ್ಗಾವಣೆಗಳನ್ನು ಪರಿಗಣಿಸಿ 08-11-2021 ರಂದು ಆದೇಶಗಳನ್ನು ಹೊರಡಿಸಲಾಗಿದೆ.
ಸದ್ಯ ಕೋರಿಕೆ ವರ್ಗಾವಣೆಗೆ ಪರಿಗಣಿಸದಿರುವ ಸಿಬ್ಬಂದಿ ವರ್ಗಾವಣೆ ಕೋರಿಕೆಗಳನ್ನು ಮುಂಬರುವ ದಿನಗಳಲ್ಲಿ ಚಾಲನಾ ಸಿಬ್ಬಂದಿ ಸ್ಥಿತಿಗತಿಗಳನ್ನು ಪರಿಗಣಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು. ಆದ್ದರಿಂದ ಸಿಬ್ಬಂದಿಗಳು ಪ್ರಸ್ತುತ ವರ್ಗಾವಣೆಗಾಗಿ ಪದೇ ಪದೇ ಅರ್ಜಿಗಳನ್ನು ಸಲ್ಲಿಸದಿರುವಂತೆ ಮತ್ತು ಮುಂದಿನ ಸಾಮಾನ್ಯ ವರ್ಗಾವಣೆಯ ಅವಧಿಯವರೆಗೆ ಕಾಯಲು ಸೂಚಿಸಿದ್ದಾರೆ. ಈ ಕುರಿತಾಗಿ ಸಿಬ್ಬಂದಿ ಸಹಕರಿಸಬೇಕೆಂದು ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

1 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement