
ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನಡೆಯುವ ಟಿ 20 ಸರಣಿಗಾಗಿ 16 ಸದಸ್ಯರ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ಟೀಮ್ ಇಂಡಿಯಾ ಟಿ 20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ರವಿಶಾಸ್ತ್ರಿ ಬದಲಿಗೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ತಂಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.ಉಪನಾಯಕನಾಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ತಂಡದಲ್ಲಿ ವಿರಾಟ್ ಕೊಹ್ಲಿ, ಶಮಿ, ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ.ಇದೇ ಮೊದಲ ಬಾರಿಗೆ ಭಾರತದ ತಂಡದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತದ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್



ನಿಮ್ಮ ಕಾಮೆಂಟ್ ಬರೆಯಿರಿ