ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ: ನಾಪತ್ತೆಯಾಗಿರುವ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್​ ಔಟ್ ನೋಟಿಸ್

ಮಂಗಳೂರು: ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾದ ನಂತರ ನಾಪತ್ತೆಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ವಿರುದ್ಧ ಈಗ ಲುಕ್​ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಟಿವಿ 9 ಕನ್ನಡ.ಕಾಮ್‌ ವರದಿ ಮಾಡಿದೆ.
ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಈವರೆಗೂ ಪತ್ತೆಯಾಗಿಲ್ಲ. ಕೆ.ಎಸ್.ಎನ್.ರಾಜೇಶ್ ಭಟ್ ದೇಶ ಬಿಟ್ಟು ತೆರಳದಂತೆ, ಮತ್ತು ಅವರ ಪತ್ತೆಗೆ ದೇಶದ ಎಲ್ಲ ಏರ್​​ಪೋರ್ಟ್​ಗಳಲ್ಲಿ ಲುಕ್​ ಔಟ್ ನೋಟಿಸ್ ಜಾರಿ ಮಾಡಲಾಗಿದೆ .ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ನೆರವು ಸಹ ಕೇಳಿದ್ದಾರೆ ಎಂದು ವರದಿ ತಿಳಿಸಿದೆ.

5 / 5. 1

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement