ನವೆಂಬರ್‌ 11ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

ಬೆಂಗಳೂರು: ಒನಕೆ ಓಬವ್ವ ಜನ್ಮ ದಿನವಾದ ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡಾವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಮೇಲೆ ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಹಠತ್ತಾಗಿ ಆಕ್ರಮಣ ಮಾಡಿದಾಗ ಕಾವಲುಗಾರ ಕಹಳೆ ಮುದ್ದಹನುಮಪ್ಪನ ಹೆಂಡತಿ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಹೈದರಾಲಿ ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದಿದ್ದಳು. ಕೊನೆಗೆ ಮೋಸದಿಂದ ಶುತ್ರುವಿನ ಕತ್ತಿಗೆ ಬಲಿಯಾದರು. ಅಂದಿನಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿರುತ್ತಾರೆ.
ಹೀಗಾಗಿ ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನಾಗಿ ಆಚರಣೆ ಮಾಡುವಂತೆ ಘೋಷಿಸಲಾಗಿದೆ. ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement