ನವೆಂಬರ್‌ 17ರಿಂದ ಮೂರು ದಿನಗಳ ಬೆಂಗಳೂರು ತಾಂತ್ರಿಕ ಶೃಂಗ ಸಭೆ

ಬೆಂಗಳೂರು: ನವೆಂಬರ್‌ 17 ರಿಂದ 19ರ ವರೆಗೆ ಬೆಂಗಳೂರು ತಾಂತ್ರಿಕ ಶೃಂಗ ಸಭೆ ನಡೆಯಲಿದೆ. 30 ರಾಷ್ಟ್ರಗಳ ಪ್ರತಿನಿಧಿಗಳು ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯಕ್ಕೆ ಚಾಲನೆ ಎಂಬ ಪರಿಕಲ್ಪನೆ ಅಡಿಯಲ್ಲಿ ಸಮ್ಮೇಳನ ನಡೆಯಲಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನ.17ರಂದು ಶೃಂಗಸಭೆ ಉದ್ಘಾಟಿಸಲಿದ್ದಾರೆ. 300ಕ್ಕೂ ಹೆಚ್ಚು ಮಂದಿ ಉಪನ್ಯಾಸಕರು ಸಮ್ಮೇಳನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯೂ ವರ್ಚ್ಯುಯಲ್ ರೂಪದಲ್ಲಿ ಶೃಂಗ ಸಭೆ ನಡೆಯಲಿದೆ. 5000ಕ್ಕೂ ಹೆಚ್ಚು ನವೋದ್ಯಮಗಳು ಸಭೆಯಲ್ಲಿ ಪಾಲ್ಗೊಳ್ಳಲಿವೆ. 300ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 20,000ಕ್ಕೂ ಹೆಚ್ಚು ವ್ಯಾಪಾರ ವಹಿವಾಟುದಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು.
ಇನ್ಫೋಸಿಸ್, ಬಯೋಕಾನ್, ರಝೋರ್ ಪೇ, ಕಿಂಡ್ರಿಲ್, ರಾಬರ್ಟ್ ಬಾಷ್, ಟೆಲ್ ಸ್ಟ್ರಾ, ಎನ್‌ಆರ್‌ಡಬ್ಲ್ಯು ಗ್ಲೋಬಲ್ ಬ್ಯುಸಿನೆಸ್, ಲಾರೀಸ್ ಬಯೋ, ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ, ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ ಮತ್ತು ಆಸ್ಟ್ರೇಲಿಯಾ ಸರ್ಕಾರ ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿವೆ ಎಂದು ಸಚಿವರು ತಿಳಿಸಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement