ಭೋಪಾಲ್​ ಆಸ್ಪತ್ರೆ ಮಕ್ಕಳ ಐಸಿಯುವಿನಲ್ಲಿ ಬೆಂಕಿ ದುರಂತ; ನಾಲ್ವರು ಮಕ್ಕಳ ಸಾವು, 36 ಮಕ್ಕಳ ರಕ್ಷಣೆ

ಭೂಪಾಲ: ಮಧ್ಯಪ್ರದೇಶದ ಭೂಪಾಲದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ನಡೆದ ಬೆಂಕಿ ದುರಂತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.
ವರದಿಗಳ ಪ್ರಕಾರ, ಮಕ್ಕಳ ಐಸಿಯು ಹೊಂದಿರುವ ಆಸ್ಪತ್ರೆಯ ಕಟ್ಟಡದ ಮೂರನೇ ಮಹಡಿಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಮಕ್ಕಳ ಐಸಿಯುವಿನಲ್ಲಿ ನವಜಾತ ಶಿಶುಗಳೂ ಸೇರಿ ಒಟ್ಟು 40 ಮಕ್ಕಳು ದಾಖಲಾಗಿದ್ದರು. ಅದರಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಉಳಿದ 36 ಮಂದಿಯನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ. ಸುಮಾರು 12ಕ್ಕೂ ಹೆಚ್ಚು ಅಗ್ನಿಶಾಮಕದಳದ ಸಿಬ್ಬಂದಿ ಸೇರಿ ಇಲ್ಲಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಪ್ರಕರಣವನ್ನು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಆದೇಶಿಸಿದ್ದಾರೆ ಅಷ್ಟೇ ಅಲ್ಲ ಮೃತಮಕ್ಕಳ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಕ್ಷಣೆಗೆ ಎಲ್ಲ ರೀತಿಯ ಕ್ರಮವನ್ನೂ ಕೈಗೊಳ್ಳಲಾಯಿತು. ಆದರೆ ಅದಾಗಲೇ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕೆಲವು ಮಕ್ಕಳನ್ನು ಇನ್ನೊಂದು ಆಸ್ಪತ್ರೆಗೆ ಕರೆದೊಯ್ಯಲು ಆಗಲಿಲ್ಲ. ಅಂಥ ನಾಲ್ಕು ಮಕ್ಕಳು ಮೃತಪಟ್ಟಿದ್ದು ನಿಜಕ್ಕೂ ಭರಿಸಲಾಗದ ನೋವು ತಂದಿದೆ ಎಂದು ಮುಖ್ಯಮಂತ್ರಿ ಶಿವರಾಜ್​ಸಿಂಗ್​ ಚೌಹಾಣ್​ ಹೇಳಿದ್ದಾರೆ.
ನಿನ್ನೆ ಸಂಜೆ ಈ ದುರ್ಘಟನೆ ನಡೆದಿತ್ತು. ಮಕ್ಕಳನ್ನು ಪಾರು ಮಾಡಲು ಕೂಡಲೇ ರಕ್ಷಣಾ ಕಾರ್ಯಾಚರಣೆಯೂ ನಡೆದಿತ್ತು. ಹಲವು ರೋಗಿಗಳನ್ನು ಸ್ಟ್ರೆಚರ್​​ನಲ್ಲಿ ಇನ್ನೊಂದು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟಾದರೂ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬೆಂಕಿ ಬೀಳುತ್ತಿದ್ದಂತೆ ಅಲ್ಲಿ ಅಡ್ಮಿಟ್​ ಆದ ಮಕ್ಕಳ ಕುಟುಂಬದವರು ಆತಂಕದಿಂದ ಅಲ್ಲಿಗೆ ಧಾವಿಸಿದ್ದರು.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement