ಮಗು ಅಪರಹಣ ಪ್ರಕರಣ; ತನಿಖೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರೂ ಸಾವು

ಕೋಲಾರ: ಮಗು ಅಪಹರಣ ಹಾಗೂ ಮೃಾಟದ ಆರೋಪದಿಂದ ಬೇಸತ್ತು ಹಾಗೂ ಪೊಲೀಸರ ತನಿಖೆಗೆ ಹೆದರಿ ವಿಷಯ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಐವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜಿಲ್ಲೆಯ ಕಾರಂಜಿಕಟ್ಟೆಯಲ್ಲಿ ನಡೆದಿದೆ. ಮಗು ಅಪರಹಣ ಪ್ರಕರಣ ಸಂಬಂಧ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಕೋಲಾರದ ಆರ್.ಎಲ್.ಜಾಲಪ್ಪ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಮುನಿಯಪ್ಪ(70), ಬಾಬು (45), ಗಂಗೋತ್ರಿ(17) ನಾರಾಯಣಮ್ಮ (65) ಹಾಗೂ ಪುಷ್ಪ (33) ಮೃತರು ಎಂದು ತಿಳಿದುಬಂದಿದೆ. ಎಲ್ಲರೂ ವಿಷ ಸೇವಿಸುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು. ಡೆತ್ ನೋಟ್ನಲ್ಲಿ ತಮ್ಮದಲ್ಲದ ತಪ್ಪಿಗೆ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಿದ್ದರು. ಇದರಿಂದ ಅವಮಾನಿತರಾಗಿ ಮನನೊಂದು ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.
ಘಟನೆ ಹಿನ್ನೆಲೆ:
ಕೋಲಾರ ತಾಲೂಕಿನ ಹೊನ್ನೇನಹಳ್ಳಿಯ ಸತ್ಯ ಹಾಗೂ ಸುಮಿತ್ರ ಎಂಬುವರು ಪ್ರೀತಿಸಿ ಮನೆಯವರಿಗೆ ತಿಳಿಸದೆ ಮದುವೆಯಾಗಿದ್ದರು. ಅವರಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಮನೆಯವರಿಗೆ ವಿಷಯ ತಿಳಿದರೆ ಹೇಗೋ ಎನ್ನುವ ಭಯದಲ್ಲಿ ಮಗುವನ್ನು ಪರಿಚಯಸ್ಥರಾದ ಕಾರಂಜಿಕಟ್ಟೆ ನಿವಾಸಿ ಗೀತಾ ಎನ್ನುವವರಿಗೆ ಅಕ್ಟೋಬರ್18 ರಂದು 9 ದಿನದ ಮಗುವನ್ನು ಕೊಟ್ಟಿದ್ದರು. ಈ ವೇಳೆ ಗೀತಾರ ಜೊತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪುಷ್ಪಾ ಎಂಬುವವರು ಹೋಗಿದ್ದರು. ಈ ಕಾರಣಕ್ಕೆ ಮಗು ಅಪಹರಣ ಪ್ರಕರಣದ ದೂರಿನಲ್ಲಿ ಪುಷ್ಪಾರ ಹೆಸರು ದಾಖಲಾಗಿತ್ತು. ಅಲ್ಲದೆ ಪೊಲೀಸರಿಗೆ ಕೋಲಾರಮ್ಮ ದೇವಾಲಯದ ಬಳಿ ಕುಳಿತು ಮಾತನಾಡಿ ಪುಷ್ಪಾ ಅವರು ಮಗುವನ್ನು ತೆಗೆದುಕೊಂಡು ಹೋಗಿರುವ ಸಿಸಿಟಿವಿ ದೃಶ್ಯ ಸಿಕ್ಕಿತ್ತು, ಹೀಗಾಗಿ ಪೊಲೀಸರು ಗೀತಾ ಹಾಗೂ ಪುಷ್ಪಾ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಅಲ್ಲದೆ ಅವರ ಉತ್ತರಕ್ಕೆ ತೃಪ್ತರಾಗೆ ಎಫೈಆರ್‌ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದರು ಎನ್ನಲಾಗಿದೆ. ಪುಷ್ಪಾ ಅವರು ಮನೆಯವರಿಗೆ ಈ ವಿಷಯ ತಿಳಿಸಿದ್ದರು. ಅಂಜಿದ ಇಡೀ ಕುಟುಂಬಸ್ಥರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಕಿತ್ಸೆ ಫಲಕಾರಿಯಾಗದೆ ಐವರೂ ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement