ರಾಜ್ಯ ವಿಧಾನಪರಿಷತ್ 25 ಸ್ಥಾನಗಳ ಚುನಾವಣೆಗೆ ದಿನಾಂಕ ನಿಗದಿ

ಬೆಂಗಳೂರು: 2022ಕ್ಕೆ ಮುಕ್ತಾಯಗೊಳ್ಳಲಿರುವಂತ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.  ಡಿಸೆಂಬರ್ 10ರಂದು ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಈ ಕುರಿತು ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ವಿಧಾನ ಪರಿಷತ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಗೊಂಡಿದ್ದ 25 ಸದಸ್ಯರ ಕಾಲಾವಧಿ 2022ಕ್ಕೆ ಮುಕ್ತಾಯಗೊಳ್ಳಲಿದೆ.
ಈ ಸ್ಥಾನಗಳಿಗೆ ಡಿಸೆಂಬರ್ 10ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಚುನಾವಣೆ ನಡೆಯಲಿದೆ. ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಸಂಬಂಧ ನವೆಂಬರ್ 16ರಂದು ಅಧಿಕೃತವಾಗಿ ಅಧಿಸೂಚನೆಯನ್ನು ಪ್ರಕಟಿಸುವುದಾಗಿ ಆಯೋಗ ತಿಳಿಸಿದೆ. ವಿಧಾನ ಪರಿಷತ್ ನಲ್ಲಿ 75 ಸದಸ್ಯರ ಬಲವಿದ್ದು, ಇದರಲ್ಲಿ ಈಗ ಮೂರನೇ ಒಂದರಷ್ಟು ಸದ್ಯಸರ ಅವಧಿ ಮುಗಿಯಲಿದ್ದು, ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement