ನವೆಂಬರ್‌ 17ರಿಂದ ಮೂರು ದಿನಗಳ ಬೆಂಗಳೂರು ತಾಂತ್ರಿಕ ಶೃಂಗ ಸಭೆ

ಬೆಂಗಳೂರು: ನವೆಂಬರ್‌ 17 ರಿಂದ 19ರ ವರೆಗೆ ಬೆಂಗಳೂರು ತಾಂತ್ರಿಕ ಶೃಂಗ ಸಭೆ ನಡೆಯಲಿದೆ. 30 ರಾಷ್ಟ್ರಗಳ ಪ್ರತಿನಿಧಿಗಳು ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯಕ್ಕೆ ಚಾಲನೆ ಎಂಬ ಪರಿಕಲ್ಪನೆ ಅಡಿಯಲ್ಲಿ ಸಮ್ಮೇಳನ ನಡೆಯಲಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ … Continued

ನಟಿ ಪೂನಂ ಪಾಂಡೆ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು; ಪತಿ ಬಂಧನ

ಮುಂಬೈ : ಬಾಲಿವುಡ್‌ ನ ಖ್ಯಾತ ನಟಿ ಪೂನಂ ಪಾಂಡೆ ತನ್ನ ಮೇಲೆ ಪತಿ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದು, ಈ ಸಂಬಂಧ ಪೂನಂ ಪಾಂಡೆ ಪತಿ ಸ್ಯಾಮ್‌ ಬಾಂಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯಿಂದಾಗಿ ಪೂನಂ ಪಾಂಡೆ ಅವರ ತಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಮಾದಕ … Continued

ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ: ನಾಪತ್ತೆಯಾಗಿರುವ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್​ ಔಟ್ ನೋಟಿಸ್

ಮಂಗಳೂರು: ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾದ ನಂತರ ನಾಪತ್ತೆಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ವಿರುದ್ಧ ಈಗ ಲುಕ್​ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಟಿವಿ 9 ಕನ್ನಡ.ಕಾಮ್‌ ವರದಿ ಮಾಡಿದೆ. ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ … Continued

ಈವರೆಗಿನ ಎಲ್ಲ ದಾಖಲೆ ಪುಡಿ ಮಾಡಿದ ಟಿ 20 ಭಾರತ-ಪಾಕ್ ನಡುವಿನ ಪಂದ್ಯ.. ಇದು ಈವರೆಗಿನ ಅತಿ ಹೆಚ್ಚು ವೀಕ್ಷಣೆ ಕಂಡ ಪಂದ್ಯ…!

ನವದೆಹಲಿ: ಟಿ 20 ವಿಶ್ವಕಪ್​ನಲ್ಲಿ ಅಕ್ಟೋಬರ್ 24 ರಂದು ನಡೆದ ಭಾರತ ಹಾಗೂ ಪಾಕಿಸ್ತಾನ್ (India-Pakistan) ಮಧ್ಯದ ಪಂದ್ಯವು ಹೊಸ ದಾಖಲೆ ಬರೆದಿದೆ. ಈ ಪಂದ್ಯವು ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ವೀಕ್ಷಣೆ ಕಂಡ ಪಂದ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸ್ಟಾರ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತ-ಪಾಕ್ ನಡುವಣ … Continued

ರಾಜ್ಯ ವಿಧಾನಪರಿಷತ್ 25 ಸ್ಥಾನಗಳ ಚುನಾವಣೆಗೆ ದಿನಾಂಕ ನಿಗದಿ

ಬೆಂಗಳೂರು: 2022ಕ್ಕೆ ಮುಕ್ತಾಯಗೊಳ್ಳಲಿರುವಂತ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.  ಡಿಸೆಂಬರ್ 10ರಂದು ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ವಿಧಾನ ಪರಿಷತ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಗೊಂಡಿದ್ದ 25 ಸದಸ್ಯರ ಕಾಲಾವಧಿ 2022ಕ್ಕೆ ಮುಕ್ತಾಯಗೊಳ್ಳಲಿದೆ. ಈ ಸ್ಥಾನಗಳಿಗೆ ಡಿಸೆಂಬರ್ … Continued

ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪುನೀತ ನೆನೆದು ಕಣ್ಣೀರಿಡುತ್ತ ಅಭಿಮಾನಿಗಳಿಗೆ ಊಟ ಬಡಿಸಿದ ಶಿವರಾಜಕುಮಾರ .!

ಬೆಂಗಳೂರು: ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪುನೀತ ನೆನೆದು ಕಣ್ಣೀರಿಡುತ್ತ ಅಭಿಮಾನಿಗಳಿಗೆ ಊಟ ಬಡಿಸಿದ ಶಿವರಾಜಕುಮಾರ .! ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಅರಮನೆ ಮೈದಾನದಲ್ಲಿ ದೊಡ್ಮನೆ ಕುಟುಂಬದಿಂದ ಅನ್ನಸಂತರ್ಪಣೆ ನಡೆಯುತ್ತಿದೆ. ಭೋಜನ ಕೂಟದಲ್ಲಿ ಅಭಿಮಾನಿಗಳಿಗೆ ತನ್ನ ತಮ್ಮ ಅಪ್ಪು ನೆನದು ಕಣ್ಣೀರಿಡುತ್ತಲೇ ನಟ ಶಿವರಾಜ್ ಕುಮಾರ್ ಊಟ ಬಡಿಸಿದ್ದಾರೆ. … Continued

ಕ್ಯಾನ್ಸರ್​ ಪೀಡಿತರಿಗಾಗಿ ಎರಡು ವರ್ಷ ಕೂದಲು ಬಿಟ್ಟು ದಾನ ಮಾಡಿದ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್​ ಪುತ್ರ.. ವಿಡಿಯೊ ಶೇರ್‌ ಮಾಡಿದ ನಟಿ

ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್ ಮತ್ತು ಶ್ರೀರಾಮ್ ನೆನೆ ಅವರ ಕಿರಿಯ ಪುತ್ರ ರಿಯಾನ್ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದಂದು (ನವೆಂಬರ್ 7) ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ. ನವೆಂಬರ್ 7, ಭಾನುವಾರ ರಾಷ್ಟ್ರೀಯ ಕ್ಯಾನ್ಸರ್ ದಿನದ ಸಂದರ್ಭದಲ್ಲಿ, ಮಾಧುರಿ ದೀಕ್ಷಿತ್ ಅವರು ತಮ್ಮ ಕಿರಿಯ ಮಗ ರಿಯಾನ್ ಕ್ಯಾನ್ಸರ್ ರೋಗಿಗಳಿಗೆ ತನ್ನ ಕೂದಲನ್ನು … Continued

ಡಬ್ಲ್ಯುಎಚ್‌ಒ ಅನುಮೋದನೆಯ ನಂತರ ನವೆಂಬರ್ 22ರಿಂದ ಬ್ರಿಟನ್ನಿನ ಅನುಮೋದಿತ ಲಸಿಕೆ ಪಟ್ಟಿಗೆ ಸೇರ್ಪಡೆಯಾದ ಕೊವ್ಯಾಕ್ಸಿನ್‌

ಲಂಡನ್: ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತುರ್ತು ಬಳಕೆ ಅನುಮೋದನೆ ನೀಡಿದ ಒಂದು ವಾರದ ನಂತರ, ಬ್ರಿಟನ್‌ ಸರ್ಕಾರವು ಅಂತಿಮವಾಗಿ ಕೋವಾಕ್ಸಿನ್ ಅನ್ನು ತನ್ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನುಮೋದಿತ ಕೋವಿಡ್ -19 ಲಸಿಕೆಗಳ ಪಟ್ಟಿಗೆ ಸೇರಿಸುವುದಾಗಿ ಹೇಳಿದೆ ಹಾಗೂ ಈ ಬದಲಾವಣೆಗಳು ನವೆಂಬರ್ 22 ರಂದು ಬೆಳಿಗ್ಗೆ 4 … Continued

ಮಗು ಅಪರಹಣ ಪ್ರಕರಣ; ತನಿಖೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರೂ ಸಾವು

ಕೋಲಾರ: ಮಗು ಅಪಹರಣ ಹಾಗೂ ಮೃಾಟದ ಆರೋಪದಿಂದ ಬೇಸತ್ತು ಹಾಗೂ ಪೊಲೀಸರ ತನಿಖೆಗೆ ಹೆದರಿ ವಿಷಯ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಐವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜಿಲ್ಲೆಯ ಕಾರಂಜಿಕಟ್ಟೆಯಲ್ಲಿ ನಡೆದಿದೆ. ಮಗು ಅಪರಹಣ ಪ್ರಕರಣ ಸಂಬಂಧ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು … Continued

ಎಂಥ ಅದೃಷ್ಟ..! : ಕೋವಿಡ್-19 ಲಸಿಕೆ ಪಡೆದಿದ್ದಕ್ಕೆ ರಾತ್ರೋರಾತ್ರಿ ಕೋಟ್ಯಧೀಶಳಾದ ಮಹಿಳೆ…!

ಸಿಡ್ನಿ: ಕೋವಿಡ್ -19 ನಿರ್ಮೂಲನೆಯಾಗುವುದು ಇನ್ನೂ ದೂರದಲ್ಲಿದೆ, ಆದ್ದರಿಂದ ಇದನ್ನು ನಿಯಂತ್ರಿಸಲು ಪ್ರಪಂಚದಾದ್ಯಂತದ ವಿವಿಧ ದೇಶಗಳ ಸರ್ಕಾರಗಳು ಕೋವಿಡ್ -19 ಲಸಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿವೆ ಮತ್ತು ಅವುಗಳನ್ನು ಆಕರ್ಷಿಸಲು ದೊಡ್ಡ ಮೊತ್ತದ ಹಣವನ್ನು ಪ್ರೋತ್ಸಾಹದ ರೂಪದಲ್ಲಿ ನೀಡುತ್ತಿವೆ. ಆಸ್ಟ್ರೇಲಿಯಾದಲ್ಲಿ ಇಂಥದ್ದೇ ಕೋವಿಡ್‌ ಲಸಿಕೆ ಪಡೆಲು ಪ್ರೋತ್ಸಾಹಿಸಲು ಇಟ್ಟಿದ್ದ ಲಸಿಕೆ ಲಾಟರಿ ಬಹುಮಾನವನ್ನು ಗೆದ್ದ ನಂತರ … Continued