ಗೋವಾದಲ್ಲಿ ಕನ್ನಡ ಭವನಕ್ಕೆ 10 ಕೋಟಿ ರೂ. : ಸಿಎಂ ಬೊಮ್ಮಾಯಿ

ಗೋವಾ: ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು 10 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ತಮ್ಮನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ.
ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ಗೋವಾ ರಾಜ್ಯದಲ್ಲಿ ನೆಲೆಸಿದ್ದು, ಅಲ್ಲಿ ಕನ್ನಡವನ್ನು ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಹೀಗಾಗಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ವಿಸ್ಕೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು. ಅಲ್ಲದೆ, ಕನ್ನಡ ಭವನ ನಿರ್ಮಾಣಕ್ಕೆ ೧೦ ಕೋಟಿ ರೂ. ಮಂಜೂರು ಮಾಡುವಂತೆ ಆದೇಶಿಸಿದರು.

0 / 5. 0

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement