ಸಕ್ರೆಬೈಲು ಆನೆ ಬಿಡಾರದ ಮರಿಯಾನೆಗೆ ‘ಪುನೀತ್’ ಎಂದು ನಾಮಕರಣ

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಂದು ನಾಮಕರಣ ಮಾಡುವ ಮೂಲಕ ಅರಣ್ಯ ಇಲಾಖೆ ವಿಶೇಷ ಗೌರವ ಸಲ್ಲಿಸಿದೆ .
ಇಂದು ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆಯುತ್ತಿರುವ ತಾಯಿ‌ ಆನೆಯಿಂದ ಮರಿಯಾನೆಯನ್ನು ಬೇರ್ಪಡಿಸುವ ಬಕಾರ್ಯಕ್ರಮ ನಡೆದಿದೆ. ತಾಯಿ ಆನೆ ನೇತ್ರಾಳಿಂದ ಮರಿಯನ್ನು ಇಂದು ಬೇರ್ಪಡಿಸಲಾಗುತ್ತಿದೆ ಈ ವೇಳೆ ಮರಿಯಾನೆಗೆ ಪುನೀತ್ ಎಂದು ನಾಮಕರಣ ಮಾಡಲಾಗಿದೆ.
ಎರಡು ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಆಗಮಿಸಿದ ನಟ ಪುನೀತ್ ರಾಜ್ ಕುಮಾರ್ ಈ ಮರಿ ಆನೆಯನ್ನು ಮುದ್ದಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೆಸರಿಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಿದೆ.

0 / 5. 0

ಪ್ರಮುಖ ಸುದ್ದಿ :-   ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ನಿಮ್ಮ ಕಾಮೆಂಟ್ ಬರೆಯಿರಿ

advertisement