ತಮಿಳುನಾಡು: ಅಸ್ವಸ್ಥ ಯುವಕನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಇನ್ಸ್‌ಪೆಕ್ಟರ್‌..!

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಜನ್ನೆರಡು ಜನ ಮೃತಪಟ್ಟಿದ್ದಾರೆ. ಈ ಮಧ್ಯೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬನನ್ನು ಹೆಗಲ ಮೇಲೆ ಹೊತ್ತೊಯ್ದು ಭಾರೀ ಸುದ್ದಿಯಾಗಿದ್ದಾರೆ.
ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಎನ್ನುವವರು 28 ವರ್ಷದ ಯುವಕನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ನಡೆದಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಇನ್ಸ್‌ಪೆಕ್ಟರ್ ಯುವಕನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ನಂತರ ಆಟೋದಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಅದನ್ನು ಸಾಮಾಜಿಕ ಜಾಲತಾಣಕ್ಕೆ ಪೊಸ್‌ ಮಾಡಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಮಹಿಳಾ ಇನ್ಸ್‌ಪೆಕ್ಟರ್ ಮಾನವೀಯ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚೆನ್ನೈ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಈಗಾಗಲೇ 12 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement