ಪ್ರಧಾನಿ ಮೋದಿ ಜೊತೆ ಬಹಳ ವಿಷಯಗಳ ಚರ್ಚೆ; ನಾಲ್ಕು ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬರಲು ಅವರಿಗೆ ಆಹ್ವಾನ: ಸಿಎಂ ಬೊಮ್ಮಾಯಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಮಾಡಿದ್ದೇನೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ನಾಲ್ಕು ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಿದೆ. ಡಿಸೆಂಬರ್‌ನಲ್ಲಿ ಎರಡು ದಿನಾಂಕ ಕೊಟ್ರೆ ಬರುವುದಾಗಿ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್​ಕಾಯಿನ್​ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಬೊಮ್ಮಾಯಿ ತಿಳಿಸಿದರು.
100 ದಿನದಲ್ಲಿ ಕೈಗೊಂಡ ಯೋಜನೆಗಳ ಬಗ್ಗೆ ಶ್ಲಾಘಿಸಿದ್ದಾರೆ. ರೈತರ ಮಕ್ಕಳಿಗೆ ಕೈಗೊಂಡ ಯೋಜನೆ ಸಮರ್ಪಕ ಜಾರಿಗೆ ಸೂಚನೆ ನೀಡಿದ್ದಾರೆ. ಟೆಂಡರ್‌ನಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯಿ್ಟ್ಟಿರುವ ಬಗ್ಗೆ ಶ್ಲಾಘಿಸಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಬಗ್ಗೆ ಮಾಹಿತಿ ನೀಡಿದ್ದೇನೆ. ಅಮೃತ ಯೋಜನೆಗಳ ಬಗ್ಗೆಯೂ ವಿವರಣೆ ಕೊಟ್ಟಿದ್ದೇನೆ. ಅದರಲ್ಲಿ ಇನ್ನಷ್ಟು ಸುಧಾರಣೆ ಬಗ್ಗೆ ಅವರು ಸಲಹೆ ನೀಡಿದ್ದಾರೆ. ಎಲ್ಲ ಯೋಜನೆಗಳಲ್ಲಿ ಯುವ ಸಮೂಹವನ್ನು ಹೆಚ್ಚಾಗಿ ಸೇರಿಸಿ ಎಂದಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement