ಬಾಲಿವುಡ್‌ ನಟಿ ಕಂಗನಾ ರಣಾವತ್ ವಿರುದ್ಧ ದೂರು ದಾಖಲು

ಮುಂಬೈ: ಭಾರತಕ್ಕೆ 2014ರಿಂದ ನಿಜವಾದ ಸ್ವಾತಂತ್ರ್ಯ ಬಂದಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂಬ ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿಕೆ ವಿರುದ್ಧ ಮುಂಬೈ ನಲ್ಲಿ ದೂರು ದಾಖಲಾಗಿದೆ.
ನಟಿ ಕಂಗನಾ ರಣಾವತ್ ಅವರು ದೇಶದ್ರೋಹದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷೆ ಪ್ರೀತಿ ಮೆನನ್ ದೂರು ದಾಖಲು ಮಾಡಿದ್ದಾರೆ‌
ಒಂದು ಪಕ್ಷ ಮತ್ತು ವ್ಯಕ್ತಿಯನ್ನು ಹೊಗಳುವ ಭರಾಟೆಯಲ್ಲಿ ಇಷ್ಟು ವರ್ಷ ದೇಶದಲ್ಲಿ ಆಡಳಿತ ನಡೆಸಿದ ವ್ಯವಸ್ಥೆಯನ್ನು ನಟಿ ಕಂಗನಾ ರಾಣಾವತ್ ಅಣಕವಾಡಿದ್ದಾರೆ. ಇದು ಒಂದು ರೀತಿ ದೇಶದ್ರೋಹದ ಪ್ರಕರಣ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡ ನಟಿ ಕಂಗನಾ ರಣಾವತ್, ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದದ್ದು 2014 ರ ನಂತರ. 1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ‘ಭಿಕ್ಷೆ’ ಎಂದು ಹೇಳಿದ್ದರು.
ಕಾಂಗ್ರೆಸ್‌ ಖಂಡನೆ:
ನಟಿ ಕಂಗನಾ ರಣಾವತ್ ಅವರು 1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ‘ಭಿಕ್ಷೆ’ ಎಂಬ ಹೇಳಿಕೆಯನ್ನು ‘ದೇಶದ್ರೋಹ’ ಎಂದು ಕಾಂಗ್ರೆಸ್ ಟೀಕಿಸಿದ್ದು, ಅವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ಸರಕಾರ ವಾಪಾಸ್ ಪಡೆಯಬೇಕು ಎಂದು ಗುರುವಾರ ಆಗ್ರಹಿಸಿದೆ.
ರಣಾವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್, ಪದ್ಮ ಪ್ರಶಸ್ತಿಗೆ ಅರ್ಹರಲ್ಲದವರಿಗೆ ಈ ಗೌರವಗಳನ್ನು ನೀಡಿದಾಗ ಏನಾಗುತ್ತದೆ ಎಂಬುದನ್ನು ಅವರ ಹೇಳಿಕೆ ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ.
ಕಂಗನಾ ರಣಾವತ್ ಅವರು, ನಮ್ಮ ಸ್ವಾತಂತ್ರ್ಯ ಚಳವಳಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಅವಮಾನವಾಗುವ ಹೇಳಿಕೆ ನೀಡಿರುವುದರಿಂದ ಎಲ್ಲಾ ಭಾರತೀಯರಲ್ಲಿ ಸಾರ್ವಜನಿಕ ಕ್ಷಮೆಯಾಚಿಸಬೇಕು’ ಎಂದು ವಲ್ಲಭ್ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement