ಮೃತ ಗರ್ಭಿಣಿಯ ದೇಹದಿಂದ ಮಗುವನ್ನು ಜೀವಂತವಾಗಿ ಹೊರತೆಗೆದ ವೈದ್ಯರು

ಗದಗ : ಮೃತ ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗುವನ್ನ ಜೀವಂತವಾಗಿ ವೈದ್ಯರು ಹೊರ ತೆಗೆದಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಮುಶಿಗೇರಿಯ ಅನ್ನಪೂರ್ಣ ಅಬ್ಬಿಗೇರಿ ಎಂಬ ಗರ್ಭಿಣಿಯೊಬ್ಬರನ್ನ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಲೋಬಿಪಿ ಕಾರಣದಿಂದ ಕರೆತರಲಾಗಿದೆ. ಅವರು ಮೂರ್ಛೆ ತಪ್ಪಿ ಹೋಗಿ ಮೃತಪಟ್ಟಿದ್ದಾರೆ. ಆದರೆ ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದು ವೈದ್ಯರಿಗೆ ತಿಳಿದ ತಕ್ಷಣ, ಕುಟುಂಸ್ಥರ ಮನವೊಲಿಸಿ, ಆಪರೇಷನ್ ಮಾಡಿ ಮಗುವನ್ನ ಹೊರತೆಗೆದಿದ್ದಾರೆ. ವೈದ್ಯರ ಸಮಯ ಪ್ರಜ್ಞೆಯಿಂದ ಮುದ್ದಾದ ಹೆಣ್ಣು ಮಗುವಿನ ಪ್ರಾಣ ಉಳಿದಿದೆ.
ವೈದ್ಯರು ಹೇಳುವಂತೆ, “ತುಂಬು ಗರ್ಭಿಣಿ ಅನ್ನಪೂರ್ಣ ಅಬ್ಬಿಗೇರಿಗೆ ಇದೇ ನವೆಂಬರ್ 4ರಂದು ಹೆರಿಗೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಇನ್ನು ಆಕೆ ತುಂಬು ಗರ್ಭಿಣಿಯಾಗಿದ್ರೂ, ಹೆರಿಗೆ ನೋವು ಕಾಣಿಸಿಕೊಂಡಿರಲಿಲ್ಲ. ಮೂರ್ಛೆ ರೋಗ ಕಾಣಿಸಿಕೊಂಡು ತೀವ್ರ ಅಸ್ವಸ್ಥಳಾಗಿದ್ದಾಳೆ. ಆಸ್ಪತ್ರೆಗೆ ಬರುವಾಗಲೇ ಗರ್ಭಿಣಿ ಮೃತಪಟ್ಟಿದ್ದಾರೆ. ಡಿಎಂಎಂ ಹೆರಿಗೆ ಆಸ್ಪತ್ರೆಯ ವೈದ್ಯರು ಸ್ಕ್ಯಾನಿಂಗ್ ಮಾಡಿ ನೋಡಿದಾಗ ಮಗುವಿನ ಹಾರ್ಟ್ ಬೀಟ್ ಇನ್ನೂ ಬಡಿದುಕೊಳ್ಳುತ್ತಿತ್ತು. 10 ನಿಮಿಷದೊಳಗೆ ಕುಟುಂಬಸ್ಥರೊಂದಿಗೆ ವೈದ್ಯರು ಚರ್ಚೆ ಮಾಡಿ ಆಪರೇಷನ್ ಮಾಡಿದ್ದರಿಂದ ಮಗು ಜೀವಂತವಾಗಿ ಉಳಿಯಲು ಸಾಧ್ಯವಾಯಿತು.
ನವೆಂಬರ್ 4ರಂದು ಈ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement