ಸೆಲ್ಫಿ ಹುಚ್ಚಿನಿಂದ ಗುಂಡ್ಯ ಹೊಳೆಯಲ್ಲಿ ನೀರು ಪಾಲಾದ ಯುವಕ

ಪುತ್ತೂರು: ಸೆಲ್ಫಿ ಹುಚ್ಚಿನಿಂದ ಯುವಕನೊಬ್ಬ ಆಕಸ್ಮಿಕವಾಗಿ ನೀರಿಗೆ ಬಿದ್ದು ಗುಂಡ್ಯದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ.
ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ಹೇಳಲಾಗಿದೆ. ಇಬ್ಬರು ಯುವಕರು ತಮ್ಮ ಟೆಂಪೋ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ತೆಗೆಯಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಯುವಕನ ಪತ್ತೆಯಾಗಿಲ್ಲ. ಈ ಪ್ರದೇಶದಲ್ಲಿ ಅತಿಯಾಗಿ ಕತ್ತಲು ಆವರಿಸಿರುವ ಹಿನ್ನೆಲೆಯಲ್ಲಿ ಮತ್ತು ಈ ಸ್ಥಳವು ಅತ್ಯಂತ ಅಪಾಯಕಾರಿ ಆಗಿರುವ ಕಾರಣದಿಂದಾಗಿ ನದಿಯಲ್ಲಿನ ಹುಡುಕಾಟ ಸದ್ಯ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಸಲಾಗುವುದು ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೇ ನೇತೃತ್ವದಲ್ಲಿ ಪೊಲೀಸರ ತಂಡವು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement