ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಭುಜದ ಮೇಲೆ ಹೊತ್ತೊಯ್ದು ರಕ್ಷಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ನಗರದ ಭೀಕರ ಮಳೆ ಮಧ್ಯೆಯೇ ಎಚ್ಚರ ತಪ್ಪಿದ್ದ ಯುವಕನೊಬ್ಬನನ್ನು ಮಹಿಳಾ ಪೊಲೀಸ್‌ ಇನ್ಸ್ಪೆಕ್ಟರ್‌ ಭುಜದ ಮೇಲೆ ಹೊತೊಯ್ದು ನಂತರ ರಿಕ್ಷಾದಲ್ಲಿ ಹಾಕಿ ಚೆನ್ನೈ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಗುರುವಾರ, ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಚೆನ್ನೈನ ಟಿಪಿ ಛತ್ರಂ ಪ್ರದೇಶದ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಉದಯ ಕುಮಾರ್ ಎಂಬ ವ್ಯಕ್ತಿಯನ್ನು ರಕ್ಷಿಸಿ ಭುಜದ ಮೇಲೆ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸ್ ಇನ್ಸ್‌ಪೆಕ್ಟರ್‌ನ ನಿಸ್ವಾರ್ಥ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಚೆನ್ನೈನ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, 28 ವರ್ಷದ ಯುವಕ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಎಂದು ವರದಿಗಳು ತಿಳಿಸಿವೆ. ಎಗ್ಮೋರ್ ಮತ್ತು ಪೆರಂಬೂರ್‌ನಂತಹ ಸ್ಥಳಗಳಲ್ಲಿ ಮರಗಳು ಉರುಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ ತಮಿಳುನಾಡಿನಲ್ಲಿ ಪ್ರವಾಹ ಉಂಟಾಗಿದ್ದು, 14 ಜನರು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ವರೆಗೆ ಚೆನ್ನೈನ ಹಲವು ಭಾಗಗಳು ನೀರಿನಿಂದ ಮುಳುಗಿದ್ದರಿಂದ, 75,000 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಇತರ ಸರ್ಕಾರಿ ಅಧಿಕಾರಿಗಳು ನಾಗರಿಕರಿಗೆ ಸಹಾಯ ಮಾಡಲು ಸಮರೋಪಾದಿಯಲ್ಲಿ ಕೆಲಸ ಮಾಡಿದರು.

ಪ್ರಮುಖ ಸುದ್ದಿ :-   ಪಾಕಿಸ್ತಾನದಿಂದ ದೂರವಾಣಿ ಕರೆ ; ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ ; ಮಿಲಿಟರಿ ಕಾರ್ಯಾಚರಣೆಗಳು ಸ್ಥಗಿತ | ವಿದೇಶಾಂಗ ಸಚಿವಾಲಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement