ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ, ರಾಜ್ಯಾದ್ಯಂತ ಏಕಕಾಲದಲ್ಲಿ ಪರೀಕ್ಷೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಇಂದು ಪ್ರಕಟ ಮಾಡಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳನ್ನು ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಸಲು ತೀರ್ಮಾನಿಸಿದೆ.
ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ.
ಈ ವೇಳಾಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ನೋಡಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4.2 / 5. 6

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement