ಬೆಂಗಳೂರು ಸೇರಿ ಕರ್ನಾಟಕದ 10 ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವಾರು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ. ಮಳೆಯ ಅಬ್ಬರಕ್ಕೆ ತಮಿಳುನಾಡಿನಲ್ಲಿ 14 ಜನರು ಮೃತಪಟ್ಟಿದ್ದಾರೆ. ತಮಿಳುನಾಡು ರಾಜ್ಯಕ್ಕೆ ಬಹಳ ಸಮೀಪ ಇರುವ ಬೆಂಗಳೂರಿನಲ್ಲೂ ಮಳೆಯ ಪ್ರಭಾವ ಉಂಟಾಗಿದ್ದು, ಮಳೆ ಹಾಗೂ ಮೋಡ ಕವಿದ ವಾತಾವರಣವಿರಲಿದೆ. ಕರ್ನಾಟಕದ ಎಲ್ಲಾ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಶನಿವಾರದಿಂದ ಸೋಮವಾರದ ವರೆಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಕೆಲವೆಡೆ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.
ಇಂದು ಮತ್ತು ನಾಳೆ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆದ್ದು, ಈ ಜಿಲ್ಲೆಗಳಿಗೆ ಮತ್ತು ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement