ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿಗೆ ಚಿಂತನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಮರು ಜಾರಿ ಮಾಡುವ ಚಿಂತನೆ ನಡೆಸಿದೆ.
ಈ ಕುರಿತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದ್ದಾರೆ. ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ನಂತರ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement