ಬಿಟ್ ಕಾಯಿನ್ ಪ್ರಕರಣ: ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬಿಟ್‌ಕಾಯಿನ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಪ್ರಕರಣದ ತನಿಖೆಯಾಬೇಕು ಎಂದು ಶುಕ್ರವಾರ ವಿಪಕ್ಷ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ.
ಇಂದು (ಶುಕ್ರವಾರ) ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಬಿಟ್‌ಕಾಯಿನ್ ಹಗರಣದ ಬಗ್ಗೆ ರಾಜ್ಯ ಸರ್ಕಾರದ ಸಂಸ್ಥೆಗಳ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಆರೋಪಿಯು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮನಸ್ಸನ್ನು ಬದಲಾಯಿಸುವ ಮಾದಕ ದ್ರವ್ಯಗಳನ್ನು ಏಕೆ ನೀಡಲಾಯಿತು ಎಂಬುದನ್ನು ಸರ್ಕಾರ ವಿವರಿಸಬೇಕು ಡಂದು ಒತ್ತಾಯಿಸಿದ ಅವರು ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಗೆ ತಿಳಿಯದಂತೆ ಇದನ್ನು ಮಾಡಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.
ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿ ಸರ್ಕಾರದಿಂದ ಸ್ಪಷ್ಟ ಸತ್ಯಾಂಶ ಹೊರಬರುವುದಿಲ್ಲ. ಯಾಕೆಂದರೆ ಇದರಲ್ಲಿ ಪೊಲೀಸ್, ಸರ್ಕಾರ ಎಲ್ಲರೂ ಇದ್ದಾರೆ. ಇಲ್ಲಿನವರು ಯಾರು ತನಿಖೆ ಮಾಡಿದರೂ ಸತ್ಯಾಂಶ ಹೊರಬರುವುದಿಲ್ಲ ಎಂದು ಅವರು ಹೇಳಿದರು.
ಶ್ರೀಕಿಯನ್ನು ಬಂಧಿಸಿದ ನಂತರ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಹಲವು ಅನುಮಾನಗಳಿವೆ. 9 ಕೋಟಿ ರೂಪಾಯಿ ಮೌಲ್ಯದ ಬಿಟ್‌ ಕಾಯಿನ್‌ಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಪ್ರಕಟಿಸಿದ್ದರು. ಇನ್‌ಸ್ಪೆಕ್ಟರ್‌ ಶ್ರೀಧರ್‌ ಪೂಜಾರ್‌ ಎಂಬವರು ಪಂಚನಾಮೆಗೆ ಸಾಕ್ಷಿಗಳನ್ನಾಗಿ ಬೆಸ್ಕಾಂ ಲೈನ್‌ಮನ್‌ ಮತ್ತು ವಾಣಿಜ್ಯ ತೆರಿಗೆ ಇಲಾಖೆಯವರನ್ನು ಕರೆಸಿದ್ದರು. ಬಿಟ್‌ಕಾಯಿನ್‌ ಬಗ್ಗೆ ಲೈನ್‌ಮನ್‌ಗಳಿಗೆ ಏನು ಗೊತ್ತಿರಲು ಸಾಧ್ಯ ಎಂದರು.
ಸೈಬರ್ ಕ್ರೈಮ್ ಪೊಲೀಸ್ ಇನ್ಸ್‌ಪೆಕ್ಟರ್ ಮುಂದೆ ಶ್ರೀಕಿ ಸ್ವಯಂಪ್ರೇರಿತ ಸಹಿ ಮಾಡಿದ ಹೇಳಿಕೆಯ ಪ್ರಕಾರ, ಅವರು 2500 ಕೋಟಿ ರೂಪಾಯಿ ಮೌಲ್ಯದ 5000 ಬಿಟ್‌ಕಾಯಿನ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ಈಗ ಅವು ಎಲ್ಲಿ, ಎಷ್ಟು ಬಳಸಿದ್ದಾನೆ, ಎಷ್ಟು ಹಂಚಿದ್ದಾನೆ ಎಂದು ಅವರು ಪ್ರಶ್ನಿಸಿದರು.
ಬಿಟ್‌ಕಾಯಿನ್‌ ವರ್ಗಾಯಿಸಿಕೊಂಡು ಹವಾಲಾ ಮೂಲಕ ಹಣ ಕೊಡುತ್ತಿದ್ದ ರಾಬಿನ್‌ ಖಂಡೇಲ್‌ವಾಲಾ ಎಂಬಾತ ಮೌರ್ಯ ಹೋಟೆಲ್‌ನಲ್ಲಿ ಪೊಲೀಸರಿಗೆ ಶರಣಾಗಿದ್ದ. ಆತನ ಬಗ್ಗೆ ಸರಿಯಾದ ತನಿಖೆಯನ್ನೇ ನಡೆಸಿಲ್ಲ. ಶ್ರೀಕಿ ವಾಲೆಟ್‌ನಲ್ಲಿ 31 ಬಿಟ್‌ಕಾಯಿನ್‌ಗಳು ಇದ್ದವು ಎಂದು ಹೇಳಲಾಗಿತ್ತು. ನಂತರ ವಾಲೆಟ್‌ ತೆರೆದಾಗ ಅಲ್ಲಿ 186 ಬಿಟ್‌ಕಾಯಿನ್‌ಗಳು ಇದ್ದವು. 31 ಬಿಟ್‌ಕಾಯಿನ್‌ಗಳು 186 ಆಗಿದ್ದು ಹೇಗೆ ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡುವಲ್ಲೂ ಪೊಲೀಸರು ವಿಳಂಬ ಮಾಡಿದ್ದಾರೆ. ಇದೆಲ್ಲವೂ ಅಕ್ರಮ ನಡೆದಿರುವ ಬಗ್ಗೆ ಸುಳಿವು ನೀಡುತ್ತದೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮೂರನೇ ಮುಖ್ಯಮಂತ್ರಿ ಯಾರು ಬೇಕಾದರೂ ಆಗಲಿ. ಆದರೆ ಮೂರನೇ ಮುಖ್ಯಮಂತ್ರಿಯಾಗುವುದು ನಿಜ. ನನ್ನ ಮಾತಿಗೆ ಈಗಲೂ ಬದ್ದ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ದಿನೇಶ ಗುಂಡೂರಾವ್‌ ಆಗ್ರಹ: ಬಿಟ್ಕಾಯಿನ್ ಹಗರಣದ ಆರೋಪ ನಿರ್ಲಕ್ಷಿಸುವುದು‌ ವ್ಯವಸ್ಥಿತ ತಂತ್ರ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಬಿಟ್ಕಾಯಿನ್ ಹಗರಣದ ಆರೋಪ ನಿರ್ಲಕ್ಷಿಸುವುದು‌ ವ್ಯವಸ್ಥಿತ ತಂತ್ರ.ಈ ಹಗರಣ ಈಗಾಗಲೇ ದೇಶಾದ್ಯಾಂತ ಸದ್ದು ಮಾಡುತ್ತಿದೆ.
ಈ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ನಾಯಕರು ಪಾರದರ್ಶಕ ತನಿಖೆ ನಡೆಸಲು ಬೊಮ್ಮಾಯಿಯವರಿಗೆ ಆಗ್ರಹಿಸಬೇಕು.ಅದರ ಬದಲು ನಿರ್ಲಕ್ಷಿಸಿ ಎಂದು ಸಲಹೆ ಕೊಟ್ಟರೆ ತನಿಖೆ ಹಳ್ಳ ಹಿಡಿಯುವುದಂತೆ.ಹಗರಣದ ತನಿಖೆ ಪಾರದರ್ಶಕವಾಗಿ ನಡೆಯಲಿ.” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement