ಯಾದಗಿರಿ: ಆಟೋ-ಲಾರಿ ಡಿಕ್ಕಿ :ಮೂವರು ಸಾವು

ಯಾದಗಿರಿ: ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಟೋದಲ್ಲಿದ್ದ ಇತರ 6 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋ ಚಾಲಕ, ಆಟೋದಲ್ಲಿದ್ದ ಮಗು ಹಾಗೂ ಮಗುವಿನ ಅಜ್ಜ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ತಾಂಡಾಗೆ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನು 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement