ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ಇದಕ್ಕೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತಿ ಸದಸ್ಯೆ ಜುಬೇದಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತನಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿಲ್ಲವೆಂದು ಮನನೊಂದು ಈ ಕೃತ್ಯಕ್ಕೆ ಮಂದಾಗಿದ್ದು, ತನಗೆ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಕಾಂಗ್ರೆಸ್ ಮುಖಂಡರ ವಿರುದ್ಧ ಜುಬೇದಾ ಆರೋಪ ಮಾಡಿದ್ದಾರೆ. ಸದ್ಯ ಎನ್.ಆರ್ ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ಅವರನ್ನು ಕಳುಹಿಸಲಾಗಿದೆ.
ಒಪ್ಪಂದ ನಡೆದಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷ ಹುದ್ದೆಯ ಅವಧಿ ಮುಗಿದಿದೆ. ಆದರೆ ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಸುರಯ್ಯಾ ಭಾನು ಮೀನಮೇಷ ಎಣಿಸುತ್ತಿದ್ದಾರೆ ಎಂಬ ಕಾರಣಕ್ಕೆ ಮನನೊಂದು ಸದಸ್ಯೆ ಜುಬೇದಾ 5-6 ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement