ರಾಜ್ಯದಲ್ಲಿ ಶೀಘ್ರವೇ ಮತಾಂತರ ವಿರೋಧ ಕಾನೂನು :ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಮತಾಂತರದ ಆರೋಪ ಕೇಳಿಬರುತ್ತಿದೆ. ಬಿಜೆಪಿ ಶಾಸಕರೇ ಮತಾಂತರ ನಡೆಯುತ್ತಿರುವ ಆರೋಪ ಮಾಡುತ್ತಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿಯೂ ಮತಾಂತರ ವಿಚಾರ ಪ್ರಸ್ತಾಪವಾಗಿತ್ತು. ಕರ್ನಾಟಕದಲ್ಲಿ ಶೀಘ್ರದಲ್ಲಿಯೇ ಮತಾಂತರ ವಿರೋಧಿ ಕಾನೂನು (Anti Conversion Law) ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಾಂತರ ವಿರೋಧಿ ಕಾಯಿದೆ ಜಾರಿಗೆ ತರುವ ಕುರಿತು ಹಲವು ಮಠಾಧೀಶರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆಮಿಷವೊಡ್ಡಿ ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಇತರ ರಾಜ್ಯಗಳಲ್ಲಿ ಜಾರಿಗೆ ತಂದಿರುವ ಕಾನೂನಿನ ಕುರಿತು ಅಧ್ಯಯನವನ್ನು ನಡೆಸಿದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ನಿನ್ನೆ ರಾಜ್ಯದ ಅನೇಕ ಸ್ವಾಮೀಜಿಗಳು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಹೇಳಿಕೆ ಬಂದಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement