ಇಂದಿನಿಂದ 3 ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ, ಚಳಿಯೂ ಹೆಚ್ಚಳ :ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನ. 16ರ ವರೆಗೂ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಚಳಿ ಗಾಳಿಯೂ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಮತ್ತು ನ. 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಚಳಿಯ ವಾತಾವರಣ ಇರಲಿದೆ.
ಹವಾಮಾನ ಇಲಾಖೆ ಇಂದು ಕರ್ನಾಟಕದ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ.
ಮುಂದಿನ 3 ದಿನ ತಮಿಳುನಾಡು, ಒಡಿಶಾ, ಆಂಧ್ರಪ್ರದೇಶದ ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳ, ಕರ್ನಾಟಕದ ಕರಾವಳಿ ಮತ್ತು ಅಂಡಮಾನ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಲಕ್ಷದ್ವೀಪ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ. ಇಂದು ದಕ್ಷಿಣ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಗಂಗಾ-ಪಶ್ಚಿಮ ಬಂಗಾಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಪ್ರಮುಖ ಸುದ್ದಿ :-   ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

 

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement