ಎನ್‌ಸಿಎ: ರಾಹುಲ್ ದ್ರಾವಿಡ್ ಜಾಗಕ್ಕೆ ವಿವಿಎಸ್ ಲಕ್ಷ್ಮಣ್ ಆಯ್ಕೆ ಖಚಿತಪಡಿಸಿದ ಗಂಗೂಲಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಸೌರವ್ ಗಂಗೂಲಿ ಭಾನುವಾರ ಭಾರತದ ಮಾಜಿ ಬ್ಯಾಟರ್ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ಲಕ್ಷ್ಮಣ್ ಅವರು ಎನ್‌ಸಿಎ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆಯೇ ಎಂಬ ಬಗ್ಗೆ ಸುದ್ದಿ ಸಂಸ್ಥೆಯೊಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಪ್ರಶ್ನಿಸಿದಾಗ, ಹೌದು ಎಂದು ಅವರು ಉತ್ತರಿಸಿದ್ದಾರೆ. ಈ ಮೂಲಕ ಎನ್ ಸಿ ಎ ಮುಖ್ಯಸ್ಥರಾಗಿ ವಿವಿಎಸ್ ಲಕ್ಷ್ಮಣ್ ಅಧಿಕಾರ ವಹಿಸಿಕೊಳ್ಳುವುದು ಖಚಿತಗೊಂಡಿದೆ.
ರಾಹುಲ್ ದ್ರಾವಿಡ್ ಅವರು ಈ ಮೊದಲು ಎನ್ ಸಿಎ ಮುಖ್ಯಸ್ಥರಾಗಿದ್ದರು. ಅವರು ತರಬೇತುದಾರರಾಗಿ ನೇಮಕವಾದ ಕಾರಣದಿಂದ ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಆ ಜಾಗಕ್ಕೆ ಒಂದು ಕಾಲದ ದ್ರಾವಿಡ್ ಬ್ಯಾಟಿಂಗ್ ಪಾರ್ಟ್ನರ್ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.
ಲಕ್ಷ್ಮಣ್ ಎನ್‌ಸಿಎ ಪಾತ್ರವನ್ನು ವಹಿಸಿಕೊಳ್ಳುವುದನ್ನು ಸೌರವ್ ಮತ್ತು ಜಯ್ ಶಾ ಇಬ್ಬರೂ ಬಯಸುತ್ತಾರೆ. ಆದರೆ ಅಂತಿಮ ನಿರ್ಧಾರ ಲಕ್ಷ್ಮಣ್ ತೆಗೆದುಕೊಳ್ಳಬೇಕಿದೆ. ಅವರು ಈಗ ಕೋಚ್ ದ್ರಾವಿಡ್ ಅವರೊಂದಿಗೆ ವಿಶೇಷ ಬಾಂಧವ್ಯವನ್ನು ಹೊಂದಿದ್ದಾರೆ. ಭಾರತೀಯ ಕ್ರಿಕೆಟ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಆ ಇಬ್ಬರು ಒಟ್ಟಾಗಿ ಕೆಲಸ ಮಾಡುವುದು ಒಂದು ಉತ್ತಮ ಸಂಯೋಜನೆಯಾಗಿದೆ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಭಾರತದ ಮಾಜಿ ನಾಯಕರೂ ಆಗಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಹುಲ್ ದ್ರಾವಿಡ್ ಅವರನ್ನು ಭಾರತ ತಂಡದ ಮುಖ್ಯ ತರಬೇತುದಾರನಾಗಲು ಒಪ್ಪಿಕೊಳ್ಳುವಂತೆ ಮಾಡುವ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement