ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 236 ಜನರಿಗೆ ಕೋವಿಡ್‌  ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 14) ಹೊಸದಾಗಿ 236 ಜನರಿಗೆ ಕೋವಿಡ್‌  ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಹಾಗೂ 264 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ. ಒಟ್ಟು 29,45,679 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,145 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 7,997 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,53,975 ಕ್ಕೆ ಏರಿಕೆಯಾಗಿದೆ. ಒಟ್ಟು 12,31,062 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ 16,312 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,600 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾ ಸೋಂಕಿನ ವಿವರ..:
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 7, ಕೊಪ್ಪಳ 0, ಮಂಡ್ಯ 1, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 5, ಉಡುಪಿ 6, ಉತ್ತರ ಕನ್ನಡ 6, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement