ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ದೊಡ್ಡಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ಜಗಳೂರು ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಶನಿವಾರ (ನವೆಂಬರ್ 13) ನಡೆದಿದ್ದು, ಮೃತಪಟ್ಟವರನ್ನು ಸೈಯದ್ (10), ಅಶ್ರಫ್ (7) ಮತ್ತು ಆಸೀಫ್ (5) ಎಂದು ಗುರುತಿಸಲಾಗಿದೆ.
ಈ ಮೂವರು ಮಕ್ಕಳು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂವರು ಬಾಲಕರು ನಿನ್ನೆ (ಶನಿವಾರ) ಮಧ್ಯಾಹ್ನ ಮನೆಯಿಂದ ಹೋದ ಬಾಲಕರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದು, ಬಳಿಕ ಕೆರೆಯಲ್ಲಿ ಈಜುಲು ಹೋಗಿರುವ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ.
ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಕ್ಕಳ ನಿವಾಸಕ್ಕೆ ಶಾಸಕ ಎಸ್.ವಿ. ರಾಮಚಂದ್ರ ಇಂದು ಭೇಟಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಕ್ಕೆ ಭೇಟಿ ನೀಡಿ ಮೃತ ಬಾಲಕರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement