ಬಂಟ್ವಾಳ: ಪಿಕ್‍ಅಪ್ ವಾಹನ ಮರಕ್ಕೆ ಡಿಕ್ಕಿ, ಇಬ್ಬರು ಸಾವು

ಬಂಟ್ವಾಳ: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಬಳಿ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಎಂದು ಗುರುತಿಸಲಾಗಿದ್ದು, ಸಿಂಚನ್ ಮತ್ತು ಸುದೀಪ ಎಂಬವರುಗಾಯಗೊಂಡಿದ್ದಾರೆ.
ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್‌ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಪಿಕ್‌ಅಪ್ ವಾಹನದ ಹಿಂಬದಿಯಲ್ಲಿದ್ದರು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement