ವಾಯು ಮಾಲಿನ್ಯದ ಬಿಕ್ಕಟ್ಟು: ದೆಹಲಿ ನಂತರ ಈಹ ಹರ್ಯಾಣದ 4 ಜಿಲ್ಲೆಗಳಲ್ಲಿ ನವೆಂಬರ್ 17 ರ ವರೆಗೆ ಶಾಲೆಗಳು ಬಂದ್‌

ನವದೆಹಲಿ: ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಿಕ್ಕಟ್ಟಿನ ಮಧ್ಯೆ, ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣ ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಭಾನುವಾರ ನಿರ್ಧರಿಸಿದೆ.
ನವೆಂಬರ್ 17 ರ ವರೆಗೆ ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲು ಸಹ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರದಿಂದ ಒಂದು ವಾರದ ವರೆಗೆ ದೆಹಲಿಯ ಎಲ್ಲಾ ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿದ್ದರು. ಅದರ ನಂತರ ಹರ್ಯಾಣ ಸರ್ಕಾರದಿಂದ ಈ ನಿರ್ಧಾರ ಬಂದಿದೆ.
ದೆಹಲಿ ವಾಯುಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್ ತುರ್ತು ಗುಂಡಿಯನ್ನು ಒತ್ತಿದ ನಂತರ ಇದು ಸಂಭವಿಸಿದೆ. ದೆಹಲಿ ಸರ್ಕಾರವು ಸೋಮವಾರದಿಂದ 100% ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದೆ.
ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು ‘ವರ್ಕ್ ಫ್ರಮ್ ಹೋಮ್’ ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ನವೆಂಬರ್ 14 ಮತ್ತು 17 ರ ನಡುವೆ ಯಾವುದೇ ನಿರ್ಮಾಣ ಚಟುವಟಿಕೆಯನ್ನು ಅನುಮತಿಸಲಾಗುವುದಿಲ್ಲ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement