1.5 ಕೋಟಿ ರೂ. ಮೋಸ ಮಾಡಿದ ಆರೋಪ: ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ, ಇತರರ ವಿರುದ್ಧ ದೂರು​ ದಾಖಲು

1.5 ಕೋಟಿ ರೂ. ಮೋಸ ಮಾಡಿದ ಆರೋಪ:ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ ವಿರುದ್ಧ ದೂರು​ ದಾಖಲು
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಅವರ ಪತಿ ರಾಜ್​ ಕುಂದ್ರಾ (Raj Kundra) ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದ ಬೆನ್ನಿಗೇ ಈಗ ಮತ್ತೊಂದು ಶಾಕ್​ ಎದುರಾಗಿದೆ
1.5 ಕೋಟಿ ರೂ. ವಂಚನೆ ಆರೋಪ ಮಾಡಿದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಅವರ ಮೇಲೆ ದೂರು ದಾಖಲಾಗಿದೆ. ಮುಂಬೈ ಮೂಲದ ಉದ್ಯಮಿಯೊಬ್ಬರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್ ಕುಂದ್ರಾ ಮತ್ತು ಇತರ ಕೆಲವು ವ್ಯಕ್ತಿಗಳ ವಿರುದ್ಧ 1.51 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಉದ್ಯಮಿ ನಿತಿನ್ ಬಾರೈ ಅವರ ದೂರಿನ ಆಧಾರದ ಮೇಲೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.
ಜುಲೈ 2014 ರಲ್ಲಿ, ಎಸ್‌ಎಫ್‌ಎಲ್ ಫಿಟ್‌ನೆಸ್ ಕಂಪನಿಯ ನಿರ್ದೇಶಕ ಕಾಶಿಫ್ ಖಾನ್, ಶೆಟ್ಟಿ, ಕುಂದ್ರಾ ಮತ್ತು ಇತರರು ಲಾಭ ಗಳಿಸಲು ಉದ್ಯಮಕ್ಕೆ 1.51 ಕೋಟಿ ರೂಪಾಯಿ ಹೂಡಿಕೆ ಮಾಡುವಂತೆ ಕೇಳಿದರು ಎಂದು ದೂರುದಾರರು ಆರೋಪಿಸಿದ್ದಾರೆ.
ಎಸ್‌ಎಫ್‌ಎಲ್ (SFL) ಫಿಟ್‌ನೆಸ್ ಕಂಪನಿಯು ತನಗೆ ಫ್ರಾಂಚೈಸಿಯನ್ನು ನೀಡುತ್ತದೆ ಮತ್ತು ನೆರೆಯ ಪುಣೆಯ ಹಡಪ್‌ಸರ್ ಮತ್ತು ಕೋರೆಗಾಂವ್‌ನಲ್ಲಿ ಜಿಮ್ ಮತ್ತು ಸ್ಪಾ ತೆರೆಯುತ್ತದೆ ಎಂದು ತನಗೆ ಭರವಸೆ ನೀಡಲಾಯಿತು ಎಂದು ದೂರುದಾರ ಹೇಳಿಕೊಂಡಿದ್ದಾನೆ, ಎಫ್‌ಐಆರ್ ಪ್ರಕಾರ ಅದು ಕಾರ್ಯರೂಪಕ್ಕೆ ಬರಲಿಲ್ಲ.
ಶಿಲ್ಪಾ ಶೆಟ್ಟಿ ತಮ್ಮದೇ ಫಿಟ್ನೆಸ್​ ಕೇಂದ್ರಗಳನ್ನು ಹೊಂದಿರುವ ಅವರು, ದೇಶದ ಬೇರೆ ಬೇರೆ ನಗರದಲ್ಲಿ ಕೂಡ ಅದರ ಖಾತೆ ಆರಂಭಿಸಲು ಚಿಂತನೆ ನಡೆಸಿದ್ದರು. ಅದಕ್ಕಾಗಿ ಕೆಲವು ಉದ್ಯಮಿಗಳಿಂದ 1.5 ಕೋಟಿ ರೂ. ಹಣ ಪಡೆದಿದ್ದರು. ಆದರೆ ಈಗ ಫಿಟ್ನೆಸ್​ ಕೇಂದ್ರವನ್ನೂ ಆರಂಭಿಸಿಲ್ಲ, ಹಣವನ್ನೂ ವಾಪಸ್​ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಮೋಸ ಮತ್ತು ನಕಲಿ ಸಹಿ ಮಾಡಿದ ಆರೋಪವನ್ನು ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ವಿರುದ್ಧ ಹೊರಿಸಲಾಗಿದೆ. ಅಶ್ಲೀಲ ಸಿನಿಮಾ ನಿರ್ಮಾಣದ ಕೇಸ್​ನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ರಾಜ್​ ಕುಂದ್ರಾ ಅವರು ಹಲವು ದಿನಗಳ ಕಾಲ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಒಂದು ರೀತಿಯಲ್ಲಿ ಅವರು ಅಜ್ಞಾತವಾಸ ಅನುಭವಿಸುತ್ತಿದ್ದರು. ಆದರೆ ಇತ್ತೀಚೆಗೆ ಪತ್ನಿ ಶಿಲ್ಪಾ ಶೆಟ್ಟಿ ಜೊತೆ ಅವರು ಮನೆಯಿಂದ ಹೊರಗೆ ಬಂದಿದ್ದರು.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement