ಬೆಳಗಾವಿ, ಚಾಮರಾಜ ನಗರ ಜಿಲ್ಲಾಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು: ಡಿಸೆಂಬರ್ 10ರಂದು ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ.ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ರವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆರ್.ವೆಂಕಟೇಶ್ ಕುಮಾರ್​, ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್​ ಅವರನ್ನು ಅವರ ಬದಲಿಗೆ ವರ್ಗಾವಣೆ … Continued

ಜಮ್ಮು ಕಾಶ್ಮೀರ: ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ನಗರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಸೋಮವಾರ ಸಂಜೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ ಹೈದರ್​ಪೊರಾ ಬೈಪಾಸ್ ಸಮೀಪ ಗುಂಡಿನ ಚಕಮಕಿ ಆರಂಭವಾಗಿತ್ತು. ಶೂಟೌಟ್ ಆರಂಭವಾದ ಕೆಲವೇ ನಿಮಿಷಗಳ ನಂತರ ಭಯೋತ್ಪಾದಕರನ್ನು ಕೊಲ್ಲಲಾಯಿತು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ … Continued

ಕನ್ನಡ ಕಡ್ಡಾಯ ಬಹುದಿನಗಳ ಬೇಡಿಕೆ: ಸರ್ಕಾರದ ಸಮರ್ಥನೆ

ಬೆಂಗಳೂರು; ಪದವಿ ಹಂತದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಬೋಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿರುವ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸಿ ಅಫಿಡವಿಟ್‌ ಸಲ್ಲಿಸಬೇಕು ಎಂದು ಸೋಮವಾರ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಎರಡು ತಾಸಿಗೂ ಹೆಚ್ಚು ಕಾಲ ಅರ್ಜಿದಾರರು ಮತ್ತು ರಾಜ್ಯ ಸರ್ಕಾರದ ವಾದವನ್ನು ಆಲಿಸಿದ ಪೀಠವು ವಿಚಾರಣೆಯನ್ನು … Continued

ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ: ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯೆ, ವಿದ್ಯಾಭ್ಯಾಸ, ವಿದ್ಯಾರ್ಥಿ, ಅಧ್ಯಾಪಕ, ವಿದ್ಯಾ ಸಂಸ್ಥೆಗಳು ಇವುಗಳು ಮಾನವ ಸಮಾಜದ ಸಂಸ್ಕೃತಿ, ಸಮೃದ್ಧಿ, ಪ್ರಗತಿ, ಉನ್ನತಿಗಳನ್ನು ನಿರ್ಧರಿಸುವ ಶಬ್ದಗಳು, ವ್ಯಕ್ತಿಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಧಾರವಾಡದ ವಿದ್ಯಾಗಿರಿಯ ಸನ್ನಿಧಿ ಕಲಾಕ್ಷೇತ್ರದಲ್ಲಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ … Continued

ಅತ್ಯಾಧುನಿಕ ಸೌಲಭ್ಯದ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಭೋಪಾಲ್: ಮಧ್ಯಪ್ರದೇಶದಲ್ಲಿಯೇ ಅತ್ಯಂತ ಅಧುನಿಕ ಎಂಬ ಪರಿಗಣಿಸಲ್ಪಟ್ಟ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಗರದಲ್ಲಿ ಉದ್ಘಾಟಿಸಿದರು. ಈ ಮೊದಲು ಈ ನಿಲ್ದಾಣವನ್ನು ಹಬೀಬ್​ಗಂಜ್ ನಿಲ್ದಾಣ ಎಂದು ಕರೆಯುತ್ತಿದ್ದರು. ಗೋಂಡಾ ಬುಡಕಟ್ಟಿಗೆ ಸೇರಿದ ರಾಣಿ ಕಮಲಾಪತಿ ಅವರ ಸ್ಮರಣಾರ್ಥ ನಿಲ್ದಾಣದ ಹೆಸರು ಬದಲಿಸಲಾಗಿದೆ. ರಾಜ್ಯಪಾಲರಾದ ಮನ್​ಗುಭಾಯ್ ಪಟೇಲ್, … Continued

ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು

ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು ಗುವಾಹಟಿ: ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಪತ್ರಕರ್ತರಾದ ಸಮೃದ್ಧಿ ಕೆ. ಸಕುನಿಯಾ ಮತ್ತು ಸ್ವರ್ಣಾ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲಾ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ದೇಶಮುಖಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಆದೇಶಿಸಿದೆ. . ಜಾರಿ ನಿರ್ದೇಶನಾಲಯಕ್ಕೆ ನೀಡಬಹುದಾಗಿದ್ದ ಕಸ್ಟಡಿ ಅವಕಾಶದ ಅವಧಿ 14 ದಿನಗಳು ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲ ಶ್ರೀರಾಮ್ … Continued

ಕರ್ನಾಟಕದಲ್ಲಿ ಸೋಮವಾರ ಕೊರೊನಾ ಹೊಸ ಪ್ರಕರಣಗಳು ಇಳಿಕೆ, ಒಂದು ಸಾವು

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಕೆ ಕಂಡಿದೆ. ಇಂದು ಒಟ್ಟು 171 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ, ಇದೇವೇಳೆ 1 ಸಾವು ದಾಖಲಾಗಿದೆ. ಹಾಗೂ ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 118 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 144 ಮಂದಿ ಆಸ್ಪತ್ರೆಯಿಂದ … Continued

ಟಿ20 ವಿಶ್ವಕಪ್ ಗೆದ್ದ ಸಂತೋಷಕ್ಕೆ ಬೂಟ್‍ನಲ್ಲಿ ಬಿಯರ್ ಹಾಕಿಕೊಂಡು ಕುಡಿದ ಆಸ್ಟ್ರೇಲಿಯಾ ಆಟಗಾರರು..! ವೀಕ್ಷಿಸಿ

ದುಬೈ: ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾರರು ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಇಬ್ಬರು ಆಸ್ಟ್ರೇಲಿಯಾ ತಂಡದ ಆಟಗಾರರು ಬೂಟ್‍ನಲ್ಲಿ ಬಿಯರ್ ಕುಡಿದು ಸಂಭ್ರಮಿಸಿದ ವಿಡಿಯೊ ಈಗ ಭಾರೀ ವೈರಲ್‌ ಆಗುತ್ತಿದೆ. ದುಬೈನಲ್ಲಿ ನಡೆದ ಅಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಯಕ ಕೇನ್ ವಿಲಿಯಮ್ಸನ್ … Continued

ಭಾರತ ಜಾಗತಿಕವಾಗಿ ಆಹಾರ ಧಾನ್ಯಗಳ ಪೂರೈಕೆ ಹಬ್ ಆಗಿ ಪರಿವರ್ತನೆ: ಸಚಿವ ಪಿಯೂಷ್ ಗೋಯಲ್‌

posted in: ರಾಜ್ಯ | 0

ಹುಬ್ಬಳ್ಳಿ: ವಿಶ್ವದಲ್ಲಿ ಭಾರತ ಕೃಷಿ ಉತ್ಪನ್ನಗಳ ರಫ್ತುವಿನಲ್ಲಿ 5ನೇ ಅತಿ ದೊಡ್ಡ ರಾಷ್ಟ್ರವಾಗಿದೆ. ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಆಹಾರ ಧಾನ್ಯಗಳ ಪೂರೈಕೆ ಹಬ್ ಆಗಿ ಪರಿವರ್ತನೆಯಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸರಬರಾಜು ಸಚಿವರಾದ ಪಿಯುಷ್ ಗೋಯಲ್ ಹೇಳಿದರು. ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿನ ಭಾರತೀಯ ಆಹಾರ ನಿಗಮದ ಉಗ್ರಾಣಗಳ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಭಾಗೀಯ … Continued