ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ದೇಶಮುಖಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಆದೇಶಿಸಿದೆ.
. ಜಾರಿ ನಿರ್ದೇಶನಾಲಯಕ್ಕೆ ನೀಡಬಹುದಾಗಿದ್ದ ಕಸ್ಟಡಿ ಅವಕಾಶದ ಅವಧಿ 14 ದಿನಗಳು ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲ ಶ್ರೀರಾಮ್ ಶಿರ್ಸಾಟ್ ದೇಶಮುಖ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಇಂದು ಕೋರಿದರು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಚ್ ಎಸ್ ಸತ್‌ಭಾಯ್ ಅವರು ದೇಶಮುಖ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ದೇಶಮುಖ್‌ ವಯಸ್ಸು ಮತ್ತು ಕೋವಿಡ್‌ನಿಂದ ಈಗಷ್ಟೇ ಗುಣಮುಖರಾಗಿರುವುದನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದ ಅವರ ಪರ ಹಾಜರಾದ ವಕೀಲರಾದ ಅನಿಕೇತ್ ನಿಕಮ್ ಮತ್ತು ಇಂದರ್‌ಪಾಲ್ ಸಿಂಗ್ ನ್ಯಾಯಾಂಗ ಬಂಧನದಲ್ಲಿರುವಾಗ ದೇಶಮುಖ್‌ ಅವರಿಗೆ ಅಗತ್ಯವಾದ ಔಷಧ ಮತ್ತು ಮನೆಯೂಟ ಒದಗಿಸಲು ಅನುಮತಿ ನೀಡಬೇಕು ಎಂದು ಕೋರಿದರು.
ಜೈಲು ವೈದ್ಯಕೀಯ ಅಧಿಕಾರಿಯು ಸೂಚಿಸಿದಂತೆ ಔಷಧ ಸ್ವೀಕರಿಸಲು ನ್ಯಾಯಾಧೀಶರು ಅನುಮತಿ ನೀಡಿದರು. ವಕೀಲರ ಕೋರಿಕೆಯ ಮೇರೆಗೆ ಅವರಿಗೆ ಹಾಸಿಗೆಯನ್ನು ನೀಡುವಂತೆಯೂ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚಿಸಿತು. ಮನೆಯೂಟ ಕುರಿತಾದ ಮನವಿಯನ್ನು ಬಾಕಿ ಇರಿಸಿದ ನ್ಯಾಯಾಲಯ ಜೈಲು ಆಹಾರದಲ್ಲಿ ಸಮಸ್ಯೆಗಳಿದ್ದಲ್ಲಿ ದೇಶಮುಖ್‌ ಅವರು ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರರು ಎಂದು ಹೇಳಿತು.
ಭ್ರಷ್ಟಾಚಾರ ಮತ್ತು ತಮ್ಮ ಸ್ಥಾನದ ದುರ್ಬಳಕೆಗೆ ಸಂಬಂಧಿಸಿದಂತೆ ದೇಶಮುಖ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನ್ಯಾಯಾಲಯ ನಿರ್ದೇಶಿಸಿದ ಬೆನ್ನಿಗೇ ಜಾರಿ ನಿರ್ದೇಶನಾಲಯವು ಮಾಜಿ ಗೃಹ ಸಚಿವರು ಮತ್ತು ಅವರ ಸಂಬಂಧಿಕರ ವಿರುದ್ಧ ತನಿಖೆ ಮುಂದಾಗಿತ್ತು.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement