ಜಮ್ಮು ಕಾಶ್ಮೀರ: ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ನಗರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಸೋಮವಾರ ಸಂಜೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ ಹೈದರ್​ಪೊರಾ ಬೈಪಾಸ್ ಸಮೀಪ ಗುಂಡಿನ ಚಕಮಕಿ ಆರಂಭವಾಗಿತ್ತು. ಶೂಟೌಟ್ ಆರಂಭವಾದ ಕೆಲವೇ ನಿಮಿಷಗಳ ನಂತರ ಭಯೋತ್ಪಾದಕರನ್ನು ಕೊಲ್ಲಲಾಯಿತು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಶ್ರೀನಗರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗಿದೆ. ನಿನ್ನೆಯಷ್ಟೇ (ನ.14) ಶ್ರೀನಗರದ ಹೃದಯಭಾಗದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದರು.

ವಲಸೆ ಕಾರ್ಮಿಕರು ಮತ್ತು ಹಿಂದುಗಳ ಮೇಲೆ ಕಾಶ್ಮೀರದಲ್ಲಿ ದಾಳಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ವಾರ ಬೆಮಿನಾ ಸಮೀಪ ಭಯೋತ್ಪಾದಕನೊಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ್ದ. ನಗರದಲ್ಲಿ ಆತ್ಮಾಹುತಿ ದಾಳಿ ನಡೆಸುವಲ್ಲಿ ಈತ ಸಕ್ರಿಯ ಪಾತ್ರ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ