ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಕೆ ಕಂಡಿದೆ.
ಇಂದು ಒಟ್ಟು 171 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ, ಇದೇವೇಳೆ 1 ಸಾವು ದಾಖಲಾಗಿದೆ. ಹಾಗೂ ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ 118 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 144 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,92,021ಕ್ಕೆ ಏರಿದೆ ಹಾಗೂ ಒಟ್ಟು 29,45,934 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾದಿಂದ 38,146 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 7,912 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಮರಣ ಪ್ರಮಾಣ ಶೇ.0.58 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.25 ರಷ್ಟಿದೆ.
ಇಂದು ಬೆಂಗಳೂರು ನಗರದಲ್ಲಿ 118 ಮಂದಿಗೆ ಹೊಸದಾಗಿ ಕೊರೊನಾ ದಾಖಲಾಗಿದೆ. 144 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲಾವಾರು ಸೋಂಕಿತರ ಸಂಖ್ಯೆ…
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 118, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 8, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 2, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 14, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 2, ಉಡುಪಿ 4, ಉತ್ತರ ಕನ್ನಡ 2, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ