ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು

ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು
ಗುವಾಹಟಿ: ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ಪತ್ರಕರ್ತರಾದ ಸಮೃದ್ಧಿ ಕೆ. ಸಕುನಿಯಾ ಮತ್ತು ಸ್ವರ್ಣಾ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲಾ ಚೀಫ್ ಜ್ಯೂಡಿಷಿಯಲ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ನ್ಯಾಯಾಲಯ ಇಬ್ಬರಿಗೂ ಸೂಚಿಸಿದೆ.
ರಾಜ್ಯದ ಮಸೀದಿಯೊಂದರಲ್ಲಿ ನಡೆದ ವಿಧ್ವಂಸಕ ಕೃತ್ಯದ ಕುರಿತು ವರದಿ ಮಾಡಿದ್ದಕ್ಕಾಗಿ ಈ ಇಬ್ಬರೂ ಮಹಿಳಾ ಪತ್ರಕರ್ತರನ್ನು ಬಂಧಿಸಲಾಗಿತ್ತು.
ಎಚ್‌ಡಬ್ಲ್ಯೂ ನ್ಯೂಸ್ ನೆಟ್‌ವರ್ಕ್‌ಗಾಗಿ ಕೆಲಸ ಮಾಡುವ ಈ ಪತ್ರಕರ್ತರು ತ್ರಿಪುರಾದಲ್ಲಿ ಇತ್ತೀಚಿನ ಹಿಂಸಾಚಾರವನ್ನು ವರದಿ ಮಾಡುತ್ತಿದ್ದರು.
ಕಳೆದ ರಾತ್ರಿ ಕರೀಂಗಂಜ್‌ನಿಂದ ಮುಂಬೈ ಮೂಲದ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರು ಸುದ್ದಿ ಮಾಡಲು ಬಂದಿದ್ದರು. ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಮಾಧ್ಯಮಗಳಲ್ಲಿ ಧಾರ್ಮಿಕ ವಿಧ್ವಂಸಕ ಕೃತ್ಯಗಳು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದೆ. ಅವರು ಸತ್ಯವನ್ನು ಪರಿಶೀಲಿಸಲು ಮತ್ತು ಸುದ್ದಿ ಮಾಡಲು ಇಲ್ಲಿಗೆ ಬಂದರು. ಅವರು ಉದಯಪುರ ಮತ್ತು ಉತ್ತರ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದರು, ಅಲ್ಲಿ ಮಸೀದಿಗಳ ಮೇಲೆ ದಾಳಿ ಮತ್ತು ಧ್ವಂಸ ಮಾಡಲಾಗಿದೆ ಎಂಬ ಆರೋಪಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದರು. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ಅವರ ಮೇಲೆ ತ್ರಿಪುರಾದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇಬ್ಬರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಮ್‌ಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದರು. ನಂತರ ಅವರನ್ನು ತ್ರಿಪುರಾ ಪೊಲೀಸರಿಗೆ ಹಸ್ತಾಂತರಿಸಿದ್ದರು.
ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪತ್ರಕರ್ತರ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿತ್ತು ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement