ಪುನೀತ್‌ ನೆನೆದು ಬಿಕ್ಕಿಬಿಕ್ಕಿ ಅತ್ತ ಶಿವರಾಜಕುಮಾರ-ರಾಘವೇಂದ್ರ ರಾಜಕುಮಾರ

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವ್ರು ನಿಧನರಾಗಿ ಇಂದಿಗೆ 19 ದಿನಗಳಾಗಿವೆ. ಆದ್ರೂ ಕುಟುಂಬಸ್ಥರು ಸೇರಿ ಆಭಿಮಾನಿಗಳ ದುಃಖವಿನ್ನೂ ಕಡಿಮೆಯಾಗಿಲ್ಲ. ಈ ನಡುವೆ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅಪ್ಪು ಕುಟುಂಬಸ್ಥರು ಭಾವುಕರಾಗಿದ್ದು, ಪ್ರೀತಿಯ ತಮ್ಮನನ್ನ ಕಳೆದುಕೊಂಡ ನಟರಾದ ಶಿವರಾಜಕುಮಾರ ಹಾಗೂ … Continued

ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ದೂರು ದಾಖಲು

ಬೆಂಗಳೂರು : ಉಡುಪಿ ಶ್ರೀ ಕೃಷ್ಣ ಮಠದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ದಾಖಲಾಗಿದೆ. ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ, ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು … Continued

ವಿಶ್ವದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಸಾಧ್ಯತೆ: ಡಬ್ಲೂಎಚ್‌ಒ ವಿಜ್ಞಾನಿ

ಜಿನೆವಾ: ಕೋವಿಡ್-19 ಮೂರನೇ ಅಲೆಯ ಆತಂಕದ ನಡುವೆಯೇ ವಿಶ್ವದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಯುರೋಪ್‌ನ ಅನೇಕ ರಾಷ್ಟ್ರಗಳಲ್ಲಿ ಸೋಂಕಿನ ಸಂಖ್ಯೆಯಲ್ಲಿ ಮತ್ತೊಮ್ಮೆ ಏರಿಕೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿಲ್ಲ. ದುರ್ಬಲ ವರ್ಗಗಳಿಗೆ ಲಸಿಕೆ ನೀಡಿರುವುದರಿಂದಲೇ … Continued

ಪುನೀತ್‌ ಹೊತ್ತಿದ್ದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊರುತ್ತೇನೆ, ಪ್ರಚಾರಕ್ಕಾಗಿ ಈ ಕೆಲಸ ಮಾಡುತ್ತಿಲ್ಲ: ನಟ ವಿಶಾಲ್‌

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರು ಹೊತ್ತಿದ್ದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನಾನು ಹೊರುತ್ತೇನೆಂದು ಮೊದಲೇ ಹೇಳಿದ್ದೆ. ಆ ಮಾತನ್ನು ಉಳಿಸಿಕೊಳ್ಳುತ್ತೇನೆ. ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡುತ್ತಿಲ್ಲ ಎಂದು ತಮಿಳು ನಟ ವಿಶಾಲ್‌ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಪುನೀತ್‌ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ನಮ್ಮನ್ನು ಆಗಲಿದ್ದು ಬೇಸರ ತರಿಸಿದೆ. ಪುನೀತ್ … Continued

ಕುಮಟಾ: ನವೆಂಬರ್‌ 18-19ರಂದು ಡಾ.ಎ.ವಿ ಬಾಳಿಗಾ ವಾಣಿಜ್ಯ ಕಾಲೇಜಿಗೆ ನ್ಯಾಕ್ ಸಮಿತಿ

ಕುಮಟಾ; ರಾಜ್ಯದ ಪ್ರತಿಷ್ಠಿತ ಮಹಾವಿದ್ಯಾಲಯದಲ್ಲಿ ಒಂದಾಗಿರುವ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಡಾ.ಎ.ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪರಿವೀಕ್ಷಣೆಗಾಗಿ ನ್ಯಾಕ್ ಸಮಿತಿಯು ಆಗಮಿಸಲಿದೆ. ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯವು ನ್ಯಾಕ್ ಮೌಲ್ಯಮಾಪನ ಮತ್ತು ಮರು-ಮಾನ್ಯತೆ ಪ್ರಕ್ರಿಯೆಗೆ ಒಳಪಡುತ್ತಿದ್ದು ನವೆಂಬರ್‌ ೧೮ ಮತ್ತು ೧೯ ೨೦೨೧ರಂದು ನ್ಯಾಕ್ ಸಮಿತಿಯ ಸದಸ್ಯರು ಮಹಾವಿದ್ಯಾಲಯಕ್ಕೆ ತಮ್ಮ ನಿಯೋಜಿತ … Continued

ಈಗ ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆ ನಡೆಸಬಹುದು; ಕೇಂದ್ರ ಸರ್ಕಾರದಿಂದ ಅನುಮತಿ

ನವದೆಹಲಿ: ಹತ್ಯೆ, ಆತ್ಮಹತ್ಯೆ, ಅತ್ಯಾಚಾರ ಮತ್ತು ಕೊಳೆತ ದೇಹಗಳನ್ನು ಹೊರತುಪಡಿಸಿ ಸಾಕಷ್ಟು ಮೂಲಸೌಕರ್ಯ ಹೊಂದಿರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ನಂತರ ಮರಣೋತ್ತರ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ. ಈ ಬೆಳವಣಿಗೆಯನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ, “ಬ್ರಿಟಿಷರು ಜಾರಿಗೆ ತಂದ ವ್ಯವಸ್ಥೆಗೆ ಅಂತ್ಯ! ಮರಣೋತ್ತರ ಪರೀಕ್ಷೆಯನ್ನು ರಾತ್ರಿಯಿಡೀ … Continued

ಕಲಬುರಗಿ ಪಾಲಿಕೆ ಮೇಯರ್ -ಉಪಮೇಯರ್‌ ಚುನಾವಣೆ ಮುಂದೂಡಿಕೆ

ಕಲಬುರಗಿ: ರಾಜ್ಯದ ಗಮನ ಸೆಳೆದಿದ್ದ ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ- ಉಪಮಹಾಪೌರ ಚುನಾವಣೆ ಈಗ ಮುಂದೂಡಲಾಗಿದೆ. ಮೇಐರ್‌ ಹಾಗೂ ಉಪಮೇಯರ್‌ ಚುನಾವಣೆ ಇದೇ ಇದೇ ನವೆಂಬರ್‌ 20ರಂದು ನಿಗದಿಯಾಗಿತ್ತು. ಈಗ ಚುನಾವಣೆ ಮುಂದೂಡಿ ಪ್ರಾದೇಶಿಕ ಆಯುಕ್ತರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಜಿಲ್ಲಾಡಳಿತ ಕಾರ್ಯನಿರತವಾಗಿದ್ದರಿಂದ … Continued

ಲಖೀಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್‌

ಲಕ್ನೋ: ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮುಖೇಶ್ ಮಿಶ್ರಾ ಹಾಗೂ ಮತ್ತಿಬ್ಬರ ಜಾಮೀನು ಅರ್ಜಿ ವಜಾ ಮಾಡಿದ್ದಾರೆ. ಪ್ರಕರಣ ತೀವ್ರ ಸ್ವರೂಪದಾಗಿದ್ದು, ಗಂಭೀರವಾಗಿದೆ. ಅಲ್ಲದೇ ತನಿಖೆ ಇನ್ನೂ ಚಾಲ್ತಿಯಲ್ಲಿದ್ದು … Continued

ಈಗ ಚೀನಾ ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಡ್ರ್ಯಾಗನ್..!

ಬೀಜಿಂಗ್: ಚೀನಾ ಈಗ ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರವಾಗಿದೆ ಎಂದು ಬ್ಲೂಮ್‌ಬರ್ಗ್‌ನ ವರದಿಯೊಂದು ಹೇಳಿದೆ. ಕಳೆದ ಎರಡು ದಶಕಗಳಲ್ಲಿ ಜಾಗತಿಕ ಸಂಪತ್ತು ಮೂರು ಪಟ್ಟು ಹೆಚ್ಚಾಗಿದೆ ಮತ್ತು ಅದರಲ್ಲಿ ಚೀನಾವು ಅಗ್ರಸ್ಥಾನದಲ್ಲಿದೆ ಮತ್ತು ಅದು ಅಮೆರಿಕವನ್ನು ಹಿಂದಿಕ್ಕಿದೆ. McKinsey & Co. ನಲ್ಲಿ ಕೆಲಸ ಮಾಡುವ ಸಲಹೆಗಾರರ ​​ಸಂಶೋಧನಾ ವಿಭಾಗವು ಹತ್ತು ವಿವಿಧ ದೇಶಗಳ ಬ್ಯಾಲೆನ್ಸ್ … Continued

ಉಗಾಂಡಾ: ಕಂಪಾಲಾದಲ್ಲಿ”ಭಾರತೀಯ ಪ್ಯಾರಾ ಬ್ಯಾಡ್ಮಿಂಟನ್ ತಂಡ ತಂದಿದ್ದ ಹೊಟೇಲ್‌ ಸಮೀಪವೇ ಸರಣಿ ಬಾಂಬ್ ಸ್ಫೋಟ: ಎಲ್ಲರೂ ಸುರಕ್ಷಿತ

ಉಗಾಂಡಾ ರಾಜಧಾನಿಯಯಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ ಕನಿಷ್ಠ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಹಲವಾರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಭಾರತೀಯ ಪ್ಯಾರಾ-ಬ್ಯಾಡ್ಮಿಂಟನ್ ತಂಡ ತಂಗಿದ್ದ ಹೋಟೆಲಿನ ಪಕ್ಕದಲ್ಲಿಯೇ ಈ ಸ್ಫೋಟಗಳು ಸಂಭವಿಸಿದ್ದು, ತಂಡ ಯಾವುದೇ ಅಪಾಯವಾಗದೆ ಬಚಾವ್‌ ಆಗಿದೆ. ಉಗಾಂಡಾದ ಪ್ಯಾರಾ-ಬ್ಯಾಡ್ಮಿಂಟನ್ ಇಂಟರ್ ನ್ಯಾಷನಲ್ 2021ರಲ್ಲಿ ಭಾಗವಹಿಸಲು ಭಾರತದ ಪ್ರಮೋದ ಭಗತ್, ಮನೋಜ್ ಸರ್ಕಾರ್ … Continued