ಕಾಂಗ್ರೆಸ್‌ ಕಾರ್ಯಕರ್ತರಿಂದ ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸ !

ಅಹ್ಮದಾಬಾದ್‌: ಗುಜರಾಥಿನ ಜಾಮ್‌ ನಗರದಲ್ಲಿ ಸ್ಥಾಪಿಸಿದ್ದ ಮಹಾತ್ಮಾ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಪ್ರತಿಮೆಯನ್ನು ಗುಜರಾತಿನ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಧ್ವಂಸಗೊಳಿಸಿದ್ದಾರೆ.
ಇಂದು ಬೆಳಗ್ಗೆ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಹಾಗೂ ಅವರ ಸಹಚರರು ಸೇರಿ ಧ್ವಂಸಗೊಳಿಸಿದ್ದಾರೆ. ಅಲ್ಲದೆ ಧ್ವಂಸಗೊಳಿಸುತ್ತಿರುವ ವೇಳೆಯಲ್ಲಿ ಕಾರ್ಯಕರ್ತರೆಲ್ಲರು ಅದರ ಮೇಲೆ ಕೇಸರಿ ಬಣ್ಣದ ಬಟ್ಟೆ ಹಾಕಿದ್ದಾರೆ.
ಕಳೆದ ಆಗಸ್ಟಿನಲ್ಲಿ ಇದನ್ನು ಜಾಮ್‍ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪಿಸುವ ನಿರ್ಧಾರ ಹಿಂದೂ ಸೇನೆ ಪ್ರಕಟಿಸಿತ್ತು. ಆದರೆ ಈ ವೇಳೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಪುತ್ಥಳಿ ಸ್ಥಾಪನೆಗೆ ಜಾಗಕ್ಕೆ ಅನುಮತಿ ನೀಡಲು ನಿರಾಕರಿಸಿದ್ದರು. ಹೀಗಾಗಿ ಈ ಮೂರ್ತಿಯನ್ನು ಹಿಂದೂ ಸೇನೆ ಎಂಬ ಸಂಘಟನೆಯು ಹನುಮಾನ್ ಆಶ್ರಮದಲ್ಲಿ ಸ್ಥಾಪಿಸಿತ್ತು. ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರುಈ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.
ಈ ಮಧ್ಯೆ 1949ರಲ್ಲಿ ಮಹಾತ್ಮಾ ಗಾಂಧಿ ಕೊಂದ ಹಂತಕನನ್ನು ಗಲ್ಲಿಗೇರಿಸಿದ ಹರಿಯಾಣದ ಅಂಬಾಲಾ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಂ ಗೋಡ್ಸೆಯ ಪ್ರತಿಮೆಯನ್ನು ತಯಾರಿಸುವುದಾಗಿ ಹಿಂದೂ ಮಹಾಸಭಾ ಹೇಳಿತ್ತು. ಅಂತೆಯೇ ಕಳೆದ ವಾರ ಮಹಾಸಭಾ ಕಾರ್ಯಕರ್ತರು ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಮಣ್ಣನ್ನು ತಂದರು. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು ಮತ್ತು ಅವುಗಳನ್ನು ಗ್ವಾಲಿಯರ್‍ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಹಿಂದೂ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಜೈವೀರ್ ಭಾರದ್ವಾಜ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement