ಜನ್ಮದಿನ ಪ್ರವಚನ ಮಾಡುತ್ತಲೇ ವಿಧಿವಶರದಾದ ಸ್ವಾಮೀಜಿ

ಬೆಳಗಾವಿ: ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಸ್ವಾಮಿಗಳು ತಮ್ಮ ಜನ್ಮದಿನತ್ತ ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ‌ ಕುಸಿದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನವೆಂಬರ್ 6ರಂದು ಈ ಘಟನೆ ನಡೆದಿದ್ದು, ಅದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಳೋಬಾಳ ಗ್ರಾಮದ‌ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ (53) ಎಂಬವರು ಲಿಂಗೈಕ್ಯರಾಗಿದ್ದಾರೆ.
ಶ್ರೀಗಳು ತಮ್ಮ ಜನ್ಮದಿನದಂದು ಪ್ರವಚನ ಮಾಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಅವರು ವೇದಿಕೆಯ ಮೇಲೆ ಕುಸಿದಿದ್ದಾರೆ. ನವೆಂಬರ್ 6 ರಂದು ಆಶೀರ್ವಚನ ನೀಡುತ್ತಿರುವಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಕ್ತರೊಬ್ಬರ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

5 / 5. 2

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

ನಿಮ್ಮ ಕಾಮೆಂಟ್ ಬರೆಯಿರಿ

advertisement