ಪುನೀತರಾಜಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪುನೀತ್ ರಾಜ್​ಕುಮಾರ್​ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಇಂದು ಕರ್ನಾಟಕ ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಹಾಗೂ ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.
‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ನಟನೆಯಲ್ಲಿ ಪ್ರತಿಭಾವಂತ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲಿ ಅಷ್ಟೊಂದು ಪ್ರಬುದ್ಧವಾಗಿ ನಟಿಸುವುದು ಸುಲಭವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
ಅಪ್ಪು ಅವರ ಹೆಸರನ್ನು ರಸ್ತೆಗೆ, ಪಾರ್ಕ್​​ಗೆ ಇಡಲು ಅನೇಕ ಆಗ್ರಹ ಬಂದಿತ್ತು. ಈ ಉದ್ದೇಶ ಸರ್ಕಾಕ್ಕೂ ಇದೆ. ‘ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಪುನೀತ್​ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ’ ಎಂದು ಹೇಳಿದರು.
ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇಲ್ಲಿಯವರೆಗೆ 9 ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement