ಬೆಂಗಳೂರು : ಉಡುಪಿ ಶ್ರೀ ಕೃಷ್ಣ ಮಠದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ದಾಖಲಾಗಿದೆ.
ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ, ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಹಾಗೂ ನನ್ನ ಆರಾಧ್ಯ ಧೈವವಾದ ಬಿಳಿಗಿರಿರಂಗನಾಥನ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕೃಷ್ಣರಾಜ ಎಂಬುವವರು ಬೆಂಗಳೂರಿನ ಹನುಮಂತನಗರ ಠಾಣೆಯಲ್ಲಿ ಹಂಸಲೇಖ ವಿರುದ್ಧ ದೂರು ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಸಲೇಖ ಅವರು ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆ ಹಂಸಲೇಖ ಕ್ಷಮೆಯಾಚಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ