ವಿಶ್ವದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಸಾಧ್ಯತೆ: ಡಬ್ಲೂಎಚ್‌ಒ ವಿಜ್ಞಾನಿ

ಜಿನೆವಾ: ಕೋವಿಡ್-19 ಮೂರನೇ ಅಲೆಯ ಆತಂಕದ ನಡುವೆಯೇ ವಿಶ್ವದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಆತಂಕ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಯುರೋಪ್‌ನ ಅನೇಕ ರಾಷ್ಟ್ರಗಳಲ್ಲಿ ಸೋಂಕಿನ ಸಂಖ್ಯೆಯಲ್ಲಿ ಮತ್ತೊಮ್ಮೆ ಏರಿಕೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿಲ್ಲ. ದುರ್ಬಲ ವರ್ಗಗಳಿಗೆ ಲಸಿಕೆ ನೀಡಿರುವುದರಿಂದಲೇ ಸಾವಿನ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ ಎಂದು ಡಾ. ಸೌಮ್ಯ ಸ್ವಾಮಿನಾಥನ್‌ ಹೇಳಿದ್ದಾರೆ.
ಕೊರೊನಾ ಲಸಿಕೆಯ ಎರಡು ಡೋಸ್‌ಗಳು ಕನಿಷ್ಠ ೧ ವರ್ಷಗಳ ಕಾಲ ಅಥವಾ ಅದಕ್ಕೂ ಸ್ವಲ್ಪ ಹೆಚ್ಚು ದಿನಗಳ ಕಾಲ ನಮ್ಮನ್ನು ಕಾಪಾಡಬಲ್ಲದು. ಹೊಸ ಅಧ್ಯಯನಗಳ ಪ್ರಕಾರ ರಕ್ತದಲ್ಲಿನ ಪ್ರತಿಕಾಯಗಳ ಮಟ್ಟ ಕ್ಷೀಣಿಸಲು ಆರಂಭಿಸಿದರೂ ಸಹ ಲಸಿಕೆಯನ್ನು ಪಡೆದವರಲ್ಲಿ ರೋಗ ನಿರೋಧಕ ಶಕ್ತಿಯು ದೀರ್ಘ ಕಾಲದವರೆಗೆ ಇರುತ್ತದೆ ಎಂದು ತಿಳಿದುಬಂದಿದೆ. ಆರೋಗ್ಯವಂತರಿಗೆ ಮಾತ್ರ ಲಸಿಕೆಯು ಅತೀ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಆರೋಗ್ಯವಂತರು ಲಸಿಕೆಯಿಂದ ಕನಿಷ್ಠ ಒಂದು ವರ್ಷ ಅಥವಾ ಅದಕ್ಕೂ ಹೆಚ್ಚು ಕಾಲ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ ಎಂದು ಹೇಳಿದರು.
ಬೂಸ್ಟರ್ ಡೋಸ್ ವಿಚಾರವಾಗಿ ಮಾತನಾಡಿದ ಅವರು, ಇದು ನಿಜಕ್ಕೂ ಒಂದು ಕುತೂಹಲಕಾರಿ ವಿಚಾರವಾಗಿದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಇನ್ನಷ್ಟು ಅಧ್ಯಯನದ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement