ಸುರತ್ಕಲ್: ನೈತಿಕ ಪೊಲೀಸ್ ಗಿರಿ, ಆರು ಜನ ಆರೋಪಿಗಳ ಬಂಧನ

ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ – ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಯುವತಿಯ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದೆ.
ಹಿಂಬಾಲಿಸಿದ ಗುಂಪು, ಯುವಕ -ಯುವತಿಯನ್ನು ವಿಚಾರಿಸಿ, ಅವರ ಮೂಲವನ್ನು ತಿಳಿದಕೊಂಡು, ಅನ್ಯ ಧರ್ಮದ ಯುವಕನನ್ನು ನಿಂದಿಸಿ, ಥಳಿಸಿದ್ದಾರೆ. ಇದಾದ ಬಳಿಕ ಯುವಕ ಹಲ್ಲೆ ಮಾಡಿದವರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಅನ್ಯ ಧರ್ಮದ ವಿದ್ಯಾರ್ಥಿನಿಯ ವಿನಂತಿಯ ಮೇರೆಗೆ ತನ್ನ ಬೈಕ್‌ನಲ್ಲಿ ಸೋಮವಾರ ರಾತ್ರಿ 10 ಗಂಟೆಗೆ ಸುರತ್ಕಲ್ ಸಮೀಪದ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್‌ಮೆಂಟ್‌ಗೆ ಡ್ರಾಪ್ ಕೊಡಲು ಹೊರಟಿದ್ದರು. ಈ ಸಂದರ್ಭ ಈ ಇಬ್ಬರನ್ನೂ ಬೈಕ್‌ಗಳಲ್ಲಿ ಹಿಂಬಾಲಿಸಿಕೊಂಡು ಬಂದ ಆರು ಮಂದಿ ಯುವಕರು ತಡೆದು ನಿಲ್ಲಿಸಿ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆಗೈದಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಯನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿ ಮಾನಹಾನಿ ಎಸಗಿದ್ದಾರೆ ಮತ್ತು ಜೀವಬೆದರಿಕೆ ಹಾಕಿದ್ದಾರೆ ಎಂದು ಸುರತ್ಕಲ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರುಈ ಸಂಬಂಧ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement